‘ಈ ಬಾರಿ NDA ಅಧಿಕಾರಕ್ಕೆ ಬರುವುದಿಲ್ಲ,BJP 200 ಸ್ಥಾನ ತಲುಪಿದರೆ ಹೆಚ್ಚು’ – ಸಿಎಂ

ಬೆಳಗಾವಿ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಆಯೋಜಿಸಿರುವ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಂಬೇಡ್ಕರ್ ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ, ಸಮಸಮಾಜ ನೀಡುತ್ತದೆ. ಇದಕ್ಕೆ ವಿರುದ್ದವಾಗಿ ಬಿಜೆಪಿಯವರು ನಡೆಯುತ್ತಿದ್ದಾರೆ. ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ. ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ ಎಂದರು.

ನಮ್ಮ ಸರ್ಕಾರದ ಬಜೆಟ್ ಗಾತ್ರ 3.71 ಲಕ್ಷ ಕೋಟಿ , ಬೊಮ್ಮಾಯಿಯವರ ಬಜೆಟ್ 23-24 ರಲ್ಲಿ 3.09 ಲಕ್ಷ ಕೋಟಿ. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಜನರಿಗೆ ಕಾಂಗ್ರೆಸ್ ನ ಮೇಲೆ ವಿಶ್ವಾಸ ಕಡಿಮೆಯಾಗಲಿ ಎಂದು ಹುನ್ನಾರ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಗ್ಯಾರಂಟಿ ಯೋಜನೆಗಳನ್ನು ಕಂಡರೆ ಆಗುವುದಿಲ್ಲ. ಅದನ್ನು ನಿಲ್ಲಿಸಬೇಕೆಂಬುದು ಅವರ ಪಿತೂರಿಯಾಗಿದೆ ಎಂದರು.ಬಡವರು, ರೈತರು , ಮಹಿಳೆಯರು, ದಲಿತರು , ಅಲ್ಪಸಂಖ್ಯಾತರ ಏಳಿಗೆ ಅವರಿಗೆ ಮುಖ್ಯವಲ್ಲ ಎಂದರು.

Advertisement

ಮೋದಿಯಿಂದ ಮತ ಕ್ರೋಢೀಕರಣಕ್ಕಾಗಿ ದ್ವೇಷದ ಭಾಷಣ

ಮೋದಿಯವರು 10 ವರ್ಷಗಳಿಂದ ಯಾವುದೇ ಸಾಧನೆಗಳನ್ನು ಮಾಡಿಲ್ಲ. 2014 ರಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಮೋದಿಯವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಮತಗಳ ಕ್ರೋಢೀಕರಣ, ಧರ್ಮ ಕ್ರೋಢೀಕರಣ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ರಾಹುಲ್ ಗಾಂಧಿಯವರು ದೇಶದ ಉದ್ದಗಲಕ್ಕೂ ಪಾದ ಯಾತ್ರೆ ಹಾಗೂ ನ್ಯಾಯ ಯಾತ್ರೆ ಮಾಡಿದರು. ದೇಶ ವಿಭಜನೆ ಮಾಡಲು ಮೋದಿಯವರು ಮಾಡಿರುವ ಪ್ರಯತ್ನಗಳಿಂದ ಬೇಸತ್ತಿದ್ದ ಜನರ ಒಡೆದ ಮನಸ್ಸನ್ನು ಒಗ್ಗೂಡಿಸಲು ಯಾತ್ರೆ ಕೈಗೊಂಡು ಯಶಸ್ವಿಯಾದರು ಎಂದರು.

ಕಾಂಗ್ರೆಸ್ ಪಕ್ಷ ನೀಡಿರುವ 25 ಗ್ಯಾರಂಟಿಗಳಿಗೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜು ಖರ್ಗೆ ಯವರು ಸಹಿ ಮಾಡಿ ಹಂಚಿದ್ದಾರೆ. ಬಡಕುಟುಂಬದ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ನೀಡುವ ಮಹಾಲಕ್ಷ್ಮಿ ಯೋಜನೆ, ಯುವನ್ಯಾಯದಡಿ ವರ್ಷಕ್ಕೆ 1 ಲಕ್ಷ ರೂ. ನೀಡುವ ಯೋಜನೆ, ರೈತರ ಬೆಳೆಗೆ ನ್ಯಾಯಯುತ ಬೆಲೆ, ಸಾಲ ಮನ್ನಾ, ಸ್ವಾಮಿನಾಥನ್ ವರದಿ ಜಾರಿ ಬೇಡಿಕೆಗಳನ್ನು ಈಡೇರಿಸುವ ‘ರೈತ ನ್ಯಾಯ’ ಯೋಜನೆಗಳ ಭರವಸೆ ನೀಡಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement