ಬೆಂಗಳೂರು: ಲೈಂಗಿಕ ಹಗರಣದ ಪ್ರಮುಖ ಆರೋಪಿ ಆಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪಲಾಯನ ಆಗಿದ್ದರು. ಈಗ ಅವರು ಸಂಜೆ 6.30ಕ್ಕೆ ದುಬೈನಿಂದ ಬೆಂಗಳೂರಿಗೆ ಬರಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ನಂತರ ಅಲ್ಲಿಂದ ದುಬೈಗೆ ಹಾರಿದ್ದರು ಎಂಬ ಮಾಹಿತಿ ಇದೆ.