ವಿಧಾನ ಪರಿಷತ್ ಚುನಾವಣೆ, ಇಂದಿನಿಂದ ಎರಡು ಶಿಕ್ಷಕರ ಕ್ಷೇತ್ರ, ಒಂದು ಪದವೀಧರ ಕ್ಷೇತ್ರ ನಾಮಪತ್ರ ಸಲ್ಲಿಕೆ ಆರಂಭ.!

 

    ದಾವಣಗೆರೆ:  ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದ್ದು ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಜೂನ್ 21 ಕ್ಕೆ ವಿಧಾನ ಪರಿಷತ್ತಿನ 3 ಪದವೀಧರರ ಹಾಗೂ 3 ಶಿಕ್ಷಕರ ಕ್ಷೇತ್ರದ ಸ್ಥಾನಗಳ ಅವಧಿ ಮುಕ್ತಾಯವಾಗುವುದರಿಂದ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮೇ 9 ರಂದು ಅಧಿಸೂಚನೆ ಪ್ರಕಟವಾಗಲಿದ್ದು ಮೇ 16 ರ ವರೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಮೇ 17 ರಂದು ನಾಮಪತ್ರಗಳ ಪರಿಶೀಲನೆ, ಮೇ 20 ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಜೂನ್ 3 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 6 ರಂದು ನಡೆಯಲಿದ್ದು ಜೂನ್ 12 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ವಿಧಾನ ಪರಿಷತ್ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿರುವುದರಿಂದ ನೀತಿಸಂಹಿತೆ ಜಾರಿಯಲ್ಲಿರುತ್ತದೆ.

Advertisement

ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 3 ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ; ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಸೇರಲಿವೆ.

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿ; ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕುಗಳು ಸೇರಲಿವೆ. ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿ; ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಈ ಕ್ಷೇತ್ರದಲ್ಲಿ ಬರಲಿವೆ.

ಆಯಾ ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿರುತ್ತಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement