ಕಲಬುರ್ಗಿ: ಮಾಜಿ ಸಂಸದ ಇಟ್ಬಾಲ್ ಅಹ್ಮದ್ ಸರಡಗಿ (81) ತಡರಾತ್ರಿ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಸುಕಿನ ಜಾವ 1 ಗಂಟೆಗೆ ಕಲಬುರ್ಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ CM ದಿ. ಧರ್ಮಸಿಂಗ್ ಪರಮಾಪ್ತರಾಗಿದ್ದ ಅವರು 13 ಮತ್ತು 14ನೇ ಲೋಕಸಭೆಯಲ್ಲಿ ಕಲಬುರ್ಗಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಸಂಜೆ 5 ಗಂಟೆಯ ನಂತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.