ಗುಜರಾತ್: ರಾಜ್ಕೋಟ್ನಲ್ಲಿ TRP ಗೇಮಿಂಗ್ ಝೂನ್ನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 32ಕ್ಕೆ ಏರಿದೆ.!
ಮೃತದೇಹಗಳು ಸುಟ್ಟು ಕರಕಲಾಗಿರುವುದರಿಂದ DNA ಪರೀಕ್ಷೆ ಮೂಲಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತಿದೆ. ಗೇಮ್ ಝೂನ್ ಮ್ಯಾನೇಜರ್ ನಿತಿನ್ ಜೈನ್, ಮಾಲೀಕ ಯುವರಾಜ್ ಸೋಲಂಕಿ ಸೇರಿದಂತೆ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದ್ದು, 72 ಗಂಟೆಯೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಆದೇಶಿಸಿದೆ.