ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜಿಗೆ ತಾತ್ಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

 

     ದಾವಣಗೆರೆ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಡಾ| ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮ ಇಲ್ಲಿ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ಪಿ.ಸಿ.ಎಂ.ಬಿ ವಿಷಯಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇಂಗ್ಲೀಷ್ ಉಪನ್ಯಾಸಕರ ಹುದ್ದೆ ಸಂಖ್ಯೆ-1, ಗಣಿತ  ಸಂಖ್ಯೆ-1, ಭೌತಶಾಸ್ತ್ರ ಸಂಖ್ಯೆ-1, ರಸಾಯನ ಶಾಸ್ತ್ರ ಸಂಖ್ಯೆ-1 ಹುದ್ದೆಗೆ ಎಂ.ಎಸ್ಸಿ ಮತ್ತು ಬಿ.ಇಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಜೂನ್ 5 ರೊಳಗಾಗಿ ವಸತಿ ಕಾಲೇಜಿನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ:9008815296, 8970159714 ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement