ಬೆಂಗಳೂರು: ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹಿನ್ನೆಲ್ಲೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಇಂದು ಮಧ್ಯರಾತ್ರಿ ಎಸ್ ಐ ಟಿ ತಂಡ ವಶಕೆ ಪಡೆದಿದೆ. ಪ್ರಜ್ವಲ್ ರೇವಣ್ಣ ಅವರನ್ನು ಇಂದು ಕೋರ್ಟ್ಗೆ ಹಾಜರು ಪಡಿಸಲಿರುವ SIT ತಂಡ, ಅವರಿಗೆ ಬೋರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಿದೆ. ಈಗಾಗಲೇ ಬೋರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್ ರೇವಣ್ಣ ಮೆಡಿಕಲ್ ಟೆಸ್ಟ್ ಗೆ ಸಕಲ ಸಿದ್ಧತೆ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಬಂದೋಬಸ್ತ್ ಬಿಗಿಯಾಗಿದೆ.
ಸುಮಾರು 70ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಇನ್ಸ್ಪೆಕ್ಟರ್ ಹಂತದಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ಎರಡು KSRP ತುಕಡಿ ನಿಯೋಜನೆ ಮಾಡಲಾಗಿದೆ. ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ಇನ್ನು ಆಸ್ಪತ್ರೆ ಅಧಿಕಾರಿಗಳು ಹಾಗೂ ಪೊಲೀಸರಿಂದ ಆಸ್ಪತ್ರೆ ಒಳಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಕೇವಲ ತುರ್ತು ಪರಿಸ್ಥಿತಿ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಆಸ್ಪತ್ರೆ ಸುತ್ತು ಬ್ಯಾರಿಕೇಡ್ ಹಾಕಿ ಬಂದೋ ಬಸ್ತ್ ಮಾಡಲಾಗಿದೆ.