ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳು ಹಾಗೂ ಪೋಷಕರಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ಒಂದನ್ನು ನೀಡಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಪ್ರಾರಂಭಿಸಲು ಸಿದ್ಧತೆ ನಡೆಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ೧ರಿಂದ ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪ್ರಾರಂಭಿಸಲಿದೆ. ‘ಹೌ ಟು ಮೇಕ್ ಇಂಗ್ಲೀಷ್ ಈಸಿ’ ಎಂಬ ಪರಿಕ್ಪನೆಯೊಂದಿಗೆ ಇಂಗ್ಲಿಷ್ ಕ್ಲಾಸ್ ಪ್ರಾರಂಭಿಸುವ ಯೋಜನೆಯನ್ನು ರೂಪಿಸುವಂತೆ ಶಾಲಾ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ. ಇನ್ನು ಈ ತರಗತಿಗಳು ಪ್ರತಿ ಶನಿವಾರ 40 ನಿಮಿಷಗಳು ನಡೆಯಲಿವೆ.
ಇದೀಗ ಸರ್ಕಾರಿ ಶಾಲೆಯ ಮಕ್ಕಳಿಗೆ ಇಂಗ್ಲಿಷ್ ಕಲಿಯುವ ಅವಕಾಶ ಕಲ್ಪಿಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಶಾಲೆಗಳಲ್ಲಿರುವ ಇಂಗ್ಲಿಷ್ ಶಿಕ್ಷಕರಿಂದ ಸ್ಪೋಕನ್ ಇಂಗ್ಲಿಷ್ ಪಾಠ ಮಾಡಲಾಗುತ್ತದೆ. ಈ ಬಗ್ಗೆ ವಿಶೇಷ ತರಬೇತಿಯನ್ನು ನೀಡಲಾಗಿದೆ. ಈ ತರಗತಿಗಳನ್ನು ಮಾಡುವ ಮೂಲಕ ಕ ಸರಕಾರಿ ಶಾಲೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಕ್ಲಿಷ್ಟವಾಗಿರುವ ಇಂಗ್ಲಿಷ್ ಭಾಷೆ ಸುಲಭವಾಗಲು ಸಹಕಾರಿಯಾಗಿದೆ.
ಇನ್ನು ಕೆಲ ವಿದ್ಯಾರ್ಥಿಗಳು ಇಂಗ್ಲಿಷ್ ಬರುವುದಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಎಸ್‌ಎಸ್‌ಎಲ್‌ಸಿ ಮುಗಿದ ಬಳಿಕ ವಿಜ್ಞಾನ ಬಿಟ್ಟು ಬೇರೆ ಬೇರೆ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇನ್ನು ವೃತ್ತಿಪರ ಕೋರ್ಸ್ ಗಳಾದ ವೈದ್ಯಕೀಯ ಮತ್ತು ಇಂಜಿನಿಯರಿಂಗ್‌ಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ(ಎಇಇ), ಎನ್ ಇಇಟಿ(ಓಇಇಖಿ), ಸಾಮಾನ್ಯ ಪ್ರವೇಶ ಪರೀಕ್ಷೆಗಳಿಗೆ ಇಂಗ್ಲೀಷ್ ಭಾಷೆ ಅತ್ಯಗತ್ಯ. ಹೀಗಾಗಿ ಶಿಕ್ಷಣ ಇಲಾಖೆಯ ಈ ಯೋಜನೆ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.