ವಿಧಾನ ಪರಿಷತ್ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ಕರ್ನಾಟಕ ವಿಧಾನ ಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆ ಹಿನ್ನೆಲೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಜಿಜೆಪಿ ಹೈಕಮಾಂಡ್ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಟಿಕೆಟ್ ಘೋಷಿಸಿದೆ.

ಚುನಾವಣೆಗೆ ನಾಪಮತ್ರ ಸಲ್ಲಿಸಲು ಸೋಮವಾರ ಕೊನೆ ದಿನವಾಗಿದೆ. ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಎಂಎಲ್‌ಸಿ ಚುನಾವಣೆಗೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದಿತ್ತು. ಅದರಲ್ಲೂ ಪ್ರಮುಖವಾಗಿ ಮಂಡ್ಯ ಲೋಕಸಭಾ ತ್ಯಾಗ ಮಾಡಿದ್ದ ಸುಮಲತಾ ಅಂಬರೀಶ್ ಅವರ ಹೆಸರು ಮುಂಚೂಣಿಯಲ್ಲಿತ್ತು. ಆದರೆ ಸುಮಲತಾ ಸೇರಿ ಪ್ರಮುಖರಿಗೆ ಟಿಕೆಟ್ ಕೈ ತಪ್ಪಿದೆ. ಹೀಗಾಗಿ ಹಲವರಿಗೆ ಭಾರಿ ನಿರಾಸೆಯುಂಟಾಗಿದೆ. ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ 3 ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಬಿಜೆಪಿಯು 3 ಅಭ್ಯರ್ಥಿಗಳನ್ನು ಘೋಷಿಸಿದೆ.

Advertisement

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement