ಬೆಂಗಳೂರು: ವಿಧಾನ ಪರಿಷತ್ನ ಶಿಕ್ಷಕರು ಮತ್ತು ಪದವೀಧರ 6 ಕ್ಷೇತ್ರಗಳಿಗೆ ಇಂದು (ಸೋಮವಾರ) ಚುನಾವಣೆ ನಡೆಯಲಿದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ.
ಇದಕ್ಕಾಗಿ ಚುನಾವಣೆಗೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆದಿದೆ. 6 ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡುತ್ತಿದ್ದು, ಬಿಜೆಪಿ 4 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಆಡಳಿತ ಪಕ್ಷ ಕಾಂಗ್ರೆಸ್ಗೆ ಸವಾಲ್ ಹಾಕಿದೆ.
ಮತದಾನ ಮಾಡುವವರು ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಪಾಸ್ ಪೋರ್ಟ್ ಸೇರಿ ಸರ್ಕಾರದ ಅಧಿಕೃತ ಗುರುತಿನ ಚೀಟಿ ತೋರಿಸಿ ಮತದಾನ ಮಾಡಬಹುದಾಗಿದೆ. ಪದವೀಧರ ಕ್ಷೇತ್ರದಲ್ಲಿ ಒಟ್ಟು 3,63,573 ಮತಗಳಿವೆ. 461 ಒಟ್ಟು ಮತ ಕೇಂದ್ರಗಳಿವೆ. ಇನ್ನು ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 70260 ಮತಗಳಿದ್ದು, 170 ಮತ ಕೇಂದ್ರಗಳಿವೆ. ಒಟ್ಟಾರೆ 78 ಅಭ್ಯರ್ಥಿಗಳಿದ್ದಾರೆ.