ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರ: ಬಿಜೆಪಿಯ ಕಂಗನಾ ರನೌತ್ ಗೆ ಮುನ್ನಡೆ

ಹಿಮಾಚಲ ಪ್ರದೇಶ: ಬಾಲಿವುಡ್ ನ ಖ್ಯಾತ ನಟಿ ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಆರಂಭಿಕ ಮುನ್ನಡೆ ಸಿಕ್ಕಿದೆ. ಇದು ಅವರ ಚೊಚ್ಚಲ ಚುನಾವಣೆಯಾಗಿದ್ದು, ಅವರು ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಪುತ್ರ ಕಾಂಗ್ರೆಸ್ ನ ವಿಕ್ರಮಾದಿತ್ಯ ಸಿಂಗ್ ವಿರುದ್ಧ ರನೌತ್ ಸ್ಪರ್ಧಿಸುತ್ತಿದ್ದಾರೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಮಂಡಿಯಲ್ಲಿ 11 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಪೈಕಿ ಬಿಜೆಪಿಯ ಕಂಗನಾ ರನೌತ್ ಮತ್ತು ಕಾಂಗ್ರೆಸ್ ಪಕ್ಷದ ವಿಕ್ರಮಾದಿತ್ಯ ಸಿಂಗ್ ನಡುವೆ ನೇರ ಸ್ಪರ್ಧೆ ಕಂಡುಬಂದಿದೆ. ಬೆಳಗ್ಗೆ ೧೦.೪೫ ರ ಮತ ಎಣಿಕೆ ಲೆಕ್ಕಾಚಾರ ಪ್ರಕಾರ, ಕಂಗನಾ ರನೌತ್ ಅವರು 225654 (+ 31092) ಮತಗಳಿಸಿದ್ದಾರೆ. ವಿಕ್ರಮಾದಿತ್ಯ ಸಿಂಗ್ 194562 ( -31092) ಮತ ಗಳಿಸಿದ್ದಾರೆ.

ಕಂಗನಾ ರನೌತ್ ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಪ್ರಬಲ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು. ಆದರೆ ಈ ವರ್ಷದ ಆರಂಭದಲ್ಲಿ ಅವರ ಉಮೇದುವಾರಿಕೆಯನ್ನು ಘೋಷಿಸಿದಾಗ ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

Advertisement

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement