ನವದೆಹಲಿ : ಮಂಡ್ಯದಲ್ಲಿ ಗೆದ್ದು ಬೀಗಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ದೆಹಲಿಗೆ ಬರುವಂತೆ ಅಮಿತ್ ಶಾ ಬುಲಾವ್ ನೀಡಿದ್ದು, ಈ ಹಿನ್ನೆಲೆ ಹೆಚ್ಡಿಕೆ ಇಂದು ದೆಹಲಿಗೆ ಹಾರಿದ್ದಾರೆ.
ಇಂದು ಸಂಜೆ ಖಾಸಗಿ ಹೋಟೆಲ್ ನಲ್ಲಿ ಎನ್ ಡಿ ಎ ಮಿತ್ರಪಕ್ಷಗಳ ಸಣೆ ನಡೆಯಲಿದ್ದು, ಈ ಸಭೆಯಲ್ಲಿ ಭಾಗವಹಿಸಲು ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ದೆಹಲಿಯ ಬಿಜೆಪಿ ಕಚೇರಿಗೆ ಬಂದು ಮಾತನಾಡುವಂತೆ ಹೆಚ್ ಡಿ ಕುಮಾರಸ್ವಾಮಿಗೆ ಅಮಿತ್ ಶಾ ಆಹ್ವಾನ ನೀಡಿದ್ದರು. ಗೆದ್ದ ಅಭ್ಯರ್ಥಿಗಳ ಜೊತೆ ಅಮಿತ್ ಶಾ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಭರ್ಜರಿ ಗೆಲುವು ದಾಖಲಿಸಿದ್ದಾರೆ. 2 ಲಕ್ಷ ಮತಗಳ ಅಂತರದಿಂದ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಜಯಭೇರಿ ಸಾಧಿಸಿದ್ದಾರೆ.