ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ.!

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ನಡೆಯುವ ದೈವಾರ್ಷಿಕ ಚುನಾವಣೆ-2024: 11 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಅಂತ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಹನ್ನೊಂದು ಸದಸ್ಯರನ್ನು ಆಯ್ಕೆ ಮಾಡಲು ದೈವಾರ್ಷಿಕ ಚುನಾವಣೆಯನ್ನು ದಿನಾಂಕ 13ನೇ ಜೂನ್, 2024 ರಂದು ನಿಗದಿಪಡಿಸಲಾಗಿತ್ತು, ಈ ಚುನಾವಣೆಗೆ ದಿನಾಂಕ 27.05.2024

ರಿಂದ 03.06.2024ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಸದರಿ ಅವಧಿಯಲ್ಲಿ ಒಟ್ಟು 12 ಜನ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ.

Advertisement

ಸದರಿ ನಾಮಪತ್ರಗಳನ್ನು ದಿನಾಂಕ :04.06.2024 ರಂದು ಪರಿಶೀಲನೆಗೆ ತೆಗೆದುಕೊಳ್ಳಲಾಗಿತ್ತು. ಪರಿಶೀಲನೆಯ ಸಂದರ್ಭದಲ್ಲಿ ಶ್ರೀ ಆಸಿಫ್ ಪಾಷಾ ಆರ್.ಎಮ್. ಎಂಬುವವರ ನಾಮಪತ್ರವು ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದ್ದು, ಉಳಿದ 11 ಜನ ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರಗೊಂಡಿದ್ದವು. ಇಂದು ದಿನಾಂಕ:06.06.2024 ರಂದು ಮಧ್ಯಾಹ್ನ 3.00 ಗಂಟೆಯವರೆಗೆ ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದ್ದು. ಯಾರು ನಾಮಪತ್ರವನ್ನು ಹಿಂಪಡೆದಿರುವುದಿಲ್ಲ. ಭರ್ತಿ ಮಾಡಬೇಕಾದ 11 ಸ್ಥಾನಗಳಿಗೆ 11 ಜನ ಅಭ್ಯರ್ಥಿಗಳು ಮಾತ್ರ ಅಂತಿಮವಾಗಿ ಕಣದಲ್ಲಿರುತ್ತಾರೆ ಅಂತ ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಐವಾನ್ ಡಿ’ ಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಕೀಸ್ ಬಾನು, ಬೋಸರಾಜು, ಡಾ. ಯತೀಂದ್ರ ಹಾಗೂ ಎ. ವಸಂತ ಕುಮಾರ ಸೇರಿ 7 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಮೂಳೆ ಮಾರುತಿರಾವ್,  ಸಿ.ಟಿ. ರವಿ, ರವಿಕುಮಾರ ಎನ್ ಸೇರಿದಂತೆ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜನತಾದಳ(ಜಾ) ಪಕ್ಷದ ಟಿ.ಎನ್‌. ಜವರಾಯಿ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆಂದು ಈ ಮೂಲಕ ಘೋಷಿಸುತ್ತೇನೆ ಎಂದಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement