ಈ 12 ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ.!

 

ಬೆಂಗಳೂರು: ರಾಜ್ಯದ ಹಲವೆಡೆ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಐದು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್ ಹಾಗೂ ಹನ್ನೆರಡು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

Advertisement

ಈ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.  ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement