‘ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್‌ ಮೈತ್ರಿʼ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಾಡಿಕೊಂಡ ಮೈತ್ರಿ ಮುಂದುವರಿಯಬೇಕು. ಮೈಸೂರು ಪಾಲಿಕೆ ಚುನಾವಣೆ ಇರಬಹುದು, ಮುಂಬರುವ ಯಾವುದೇ ಚುನಾವಣೆ ಹೊಂದಾಣಿಕೆ ಇರಬಹುದು. ಎರಡೂ ಪಕ್ಷಗಳು ಹೊಂದಾಣಿಕೆಯಿಂದ ಹೋಗಬೇಕಿದೆ. ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಗೂ ನಾವು ಸಜ್ಜಾಗಬೇಕಿದೆ ಎಂದು ಸಂಸದ ಹೆಚ್‌ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಒಡಕು ತರಬಾರದು. ನಮ್ಮಲ್ಲಿ ಯಾರೂ ಹೆಚ್ಚು ಕಡಿಮೆ ಎನ್ನುವ ಪ್ರಶ್ನೆ ಇಲ್ಲ. ಒಂದು ಕುಟುಂಬದ ಅಣ್ಣ ತಮ್ಮಂದಿರ ರೀತಿ ಹೋಗಬೇಕು. ಯಾರೇ ಒಗ್ಗಟ್ಟು ಮುರಿಯಲು ಮುಂದಾದರೆ ಅದನ್ನು ಕಿವಿ ಮೇಲೆ ಹಾಕಿಕೊಳ್ಳಬಾರದು ಎಂದು ಸಚಿವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

 

Advertisement

ಜೆಡಿಎಸ್ ಬಿಜೆಪಿಯದ್ದು ಸಹಜ ಮೈತ್ರಿ. 2018ರಲ್ಲೂ ನನಗೆ ಬಿಜೆಪಿ ಜತೆ ಸೇರಿಯೇ ಸರ್ಕಾರ ಮಾಡುವ ಆಸಕ್ತಿ ಇತ್ತು. ಈಗ ಮುಕ್ತವಾಗಿ ಎಲ್ಲಾ ವಿಷಯಗಳನ್ನು ಚರ್ಚೆ ಮಾಡುವುದಿಲ್ಲ. ಅದು ಮುಗಿದು ಹೋಗಿರುವ ಪ್ರಸಂಗ. ಆಗಿರುವ ಎಲ್ಲಾ ಕಹಿ ಘಟನೆಗಳನ್ನು ಮರೆಯಬೇಕಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಯಡಿಯೂರಪ್ಪ ಅವರು ಎಲ್ಲೆಡೆ ಓಡಾಟ ಮಾಡಿದ್ದಾರೆ. 82ರ ವಯಸ್ಸಿನಲ್ಲಿಯೂ ಅಭ್ಯರ್ಥಿಗಳ ಗೆಲುವಿಗೆ ಓಡಾಡಿದ್ದಾರೆ. ಅವರಿಗೆ ನಾನು ಹೃದಯಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಆಸೆಯೇ ದುಃಖಕ್ಕೆ ಮೂಲ ಎಂದು ಗೌತಮ ಬುದ್ಧ ಹೇಳಿದ್ದರು. ಸಿದ್ದರಾಮಯ್ಯ ಅವರು ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ ಎಂದು ಹೇಳುತ್ತಿದ್ದಾರೆ ಎಂದು ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಹಾರ ನಡೆಸಿದರು.

 

ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ. ಅದಕ್ಕಾಗಿ ಜನರನ್ನು ದೋಚುತ್ತಿದೆ. ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ ಹೀಗಾಗಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಬೆಳೆಗಳ ಏರಿಕೆಗೆ ಗ್ಯಾರಂಟಿಗಳೇ ಕಾರಣ ಎಂದು ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಅವರು ದೂರಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement