ಪುಷ್ಪಕ್ʼ ಸೇಫ್‌ ಲ್ಯಾಂಡಿಂಗ್‌ ಪ್ರಯೋಗ ಯಶಸ್ವಿ: ಇಸ್ರೋ ಹ್ಯಾಟ್ರಿಕ್‌ ಸಾಧನೆ

ಚಿತ್ರದುರ್ಗ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಹತ್ವದ ಸಾಧನೆ ಮಾಡಿದೆ. ಪುಷ್ಪಕ್‌ ಖ್ಯಾತಿಯ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ (RLV LEX-03) ಪ್ರಯೋಗವನ್ನು ಇಸ್ರೊ ಭಾನುವಾರ ಯಶಸ್ವಿಯಾಗಿ ನಡೆಸಿದೆ. ಅಲ್ಲದೇ ಇದು 3ನೇ ಮತ್ತು ಕೊನೆಯ ಪ್ರಾಯೋಗಿಕ ಉಡಾವಣೆಯೂ ಆಗಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಗ್ರಾಮದಲ್ಲಿರುವ ಇಸ್ರೋ ಸಂಸ್ಥೆಯ ಏರೋನಟಕಲ್‌ ಟೆಸ್ಟ್‌ ರೇಂಜ್‌ (ATR) ಆವರಣದ ರನ್‌ವೇನಲ್ಲಿ ಬೆಳಗ್ಗೆ 7:10 ಗಂಟೆ ವೇಳೆ ಪ್ರಯೋಗ ನಡೆಸಿದ್ದು, ಲ್ಯಾಂಡಿಂಗ್‌ ಯಶಸ್ವಿಯಾಗಿರುವುದಾಗಿ ಇಸ್ರೋ ತನ್ನ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement