ಸರ್ಕಾರದಿಂದ ಬಡ ಮಕ್ಕಳಿಗೆ ಬಂಪರ್‌: ಇನ್ನು ಮುಂದೆ ಅಂಗನವಾಡಿಯಲ್ಲೇ ಎಲ್ ಕೆಜಿ, ಯುಕೆಜಿ ಶಿಕ್ಷಣ!

ಬೆಂಗಳೂರು: ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಐ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು.

Advertisement

 

ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

 

ಪೂರ್ವಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ ೯ ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದ ಸಚಿವರು, ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

 

ನೋಂದಾಯಿಸಲು ತ್ವರಿತ ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಮಳೆಗಾಲದ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡಬೇಕು. ಟಿಸಿ, ಮರ, ಗಿಡಗಳಿದ್ದರೆ ತೆರವುಗೊಳಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಶಿಶು ಸಂಯೋಜನಾಧಿಕಾರಿಗಳು (ಸಿಡಿಪಿಒ), ಪರಿವೀಕ್ಷಣಾ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಯಾಗಿದ್ದ ಗ್ರಾಚ್ಯುಟಿ ಮೊತ್ತವನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಸುಮಾರು 2,537 ಕಾರ್ಯಕರ್ತೆಯರಿಗೆ ಆರ್ಥಿಕವಾಗಿ‌ ನೆರವಾಗಲಿದೆ. ಇದಕ್ಕಾಗಿ 29.91ಕೋಟಿ ರೂಪಾಯಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದರು.

 

ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement