ಡೆಂಗ್ಯೂ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ. ಅಗತ್ಯ ಚಿಕಿತ್ಸೆ, ಚುಚ್ಚುಮದ್ದು ನೀಡಲು ಸೂಕ್ತ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ನೀಡಿದರು. ಆರೋಗ್ಯ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿ CM ಚರ್ಚಿಸಿದರು.
ರಾಜ್ಯದಲ್ಲಿಈವರೆಗೆ ಒಟ್ಟು 5,374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ರಾಜ್ಯದಲ್ಲಿ ಮರಣ ಪ್ರಮಾಣ ಇನ್ನೂ ಕಡಿಮೆ ಪ್ರಮಾಣದಲ್ಲಿದೆ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಎಲ್ಲ ಕ್ರಮ
ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.
