ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಇಬ್ಬರು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ಬಲ್ಮಠದಲ್ಲಿ ನಡೆದಿದೆ.
ಖಾಸಗಿ ಕಟ್ಟದ ನಿರ್ಮಾಣ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಮಣ್ಣಿನಡಿ ಇಬ್ಬರು ಕೂಲಿ ಕಾರ್ಮಿಕರು ಸಿಲುಕಿಕೊಂಡಿದ್ದು, ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ನಡೆದಿದೆ.
ಸ್ಥಳಕ್ಕೆ ಎಸ್ ಡಿ ಆರ್ ಎಫ್, ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಮಣ್ಣು ತೆರವುಗೊಳಿಸಿ, ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆದಿದೆ.
