ಜು 22ರಿಂದ ಅಂಗನವಾಡಿಗಳಲ್ಲಿ ಎಲ್​ಕೆಜಿ-ಯುಕೆಜಿ ಆರಂಭ: ಮಹತ್ವದ ಮಾಹಿತಿ ಇಲ್ಲಿದೆ ನೋಡಿ

ಬೆಂಗಳೂರು: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ, ಯು.ಕೆ.ಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ K ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು ಎಂದರು.

ಗವರ್ನಮೆಂಟ್ ಮಾಂಟೆಸ್ಸರಿ ಆರಂಭ
ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Advertisement

 

30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದರು.

 

ಸಮಾಜಕ್ಕೆ ಅಂಗನವಾಡಿ ಕೊಡುಗೆ ಅಪಾರ. ಕಳೆದ 50 ವರ್ಷಗಳಿಂದ ಅಂಗನವಾಡಿ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿವೆ. ಇನ್ಮುಂದೆ ಗವರ್ನಮೆಂಟ್ ಮಾಂಟೆಸ್ಸರಿ ಆಗಿ ಬದಲಾಗಲಿದ್ದು, ಇತರ ಶಾಲೆಗಳಿಗಿಂತ ನಮ್ಮ ಅಂಗನವಾಡಿ ಕೇಂದ್ರದ ಮಕ್ಕಳು ಹೆಚ್ಚು ಸುರಕ್ಷಿತವಾಗಿರುತ್ತವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement