ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರಿಗೆ ಕೋವಿಡ್-19.!

 

ಅಮೇರಿಕ:  ಅಧ್ಯಕ್ಷ ಜೋ ಬೈಡನ್ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಕುರಿತು ಶ್ವೇತಭವನ ಮಾಹಿತಿ ನೀಡಿದ್ದು, ಜೋ ಬೈಡನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ತಿಳಿಸಿದೆ.

ಲಾಸ್ ವೇಗಾಸ್‌ನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಬೈಡನ್ ಅವರಿಗೆ ಕೋವಿಡ್ ದೃಢಪಟ್ಟಿದೆ. ಅವರು ಲಸಿಕೆ ಪಡೆದಿದ್ದಾರೆ ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ತಿಳಿಸಿದ್ದಾರೆ.

Advertisement

ಬೈಡನ್ ಡೆಲವೇರ್‌‌ಗೆ ಹಿಂತಿರುಗಿ ಅವರ ನಿವಾಸದಲ್ಲಿ ಪ್ರತ್ಯೇಕ ವಾಸದಲ್ಲಿ ಇರಲಿದ್ದಾರೆ. ಈ ವೇಳೆ ತಮ್ಮ ಕರ್ತವ್ಯವನ್ನು ನಿಭಾಯಿಸಲಿದ್ದಾರೆ. ಬೈಡನ್ ಅವರ ಆರೋಗ್ಯ ಸ್ಥಿತಿಯ ಕುರಿತು ಶ್ವೇತಭವನ ಮಾಹಿತಿ ನೀಡಲಿದೆ ಎಂದು ಪ್ರಕಟಣೆ ತಿಳಿಸಿದೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement