ಸಿಎಂ , ಸಚಿವರ ಹೆಸರು ಹೇಳಲು ಇಡಿ ಒತ್ತಾಯ -ಕಾಂಗ್ರೆಸ್ ಪಕ್ಷದಿಂದ ಸಾಂಕೇತಿಕ ಪ್ರತಿಭಟನೆ

ಬೆಂಗಳೂರು: ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಸಾಂಕೇತಿಕವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪ್ರಜಾಪ್ರಭುತ್ವಕ್ಕೆ ಮಾರಕವಾದ ನಡೆಯಿದು. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ ಎಂದರು.

ಸಂಸತ್ತಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಾಲ್ಮೀಕಿ ನಿಗಮದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಮಾತನಾಡಿ ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರೊಂದಿಗೆ ಮಾತನಾಡಿದ್ದು ಇಡಿ ದುರೂಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ಪಕ್ಷದ ವರಿಷ್ಠರು ಕೂಡ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ ಎಂದರು.

Advertisement

ಕಾನೂನಿನ ಹೋರಾಟಕೆ ಸಿದ್ಧ:
ನಾವು ಕೂಡ ಕಾನೂನಿನ ಪ್ರಕಾರ ಹೋರಾಟ ಮಾಡಲು ಸಿದ್ಧರಿದ್ದೇವೆ. ಇಡಿ, ಸಿಬಿಐ ಏನು ಮಾಡುತ್ತಾರೆ ಎಂದು ನಮಗೆ ತಿಳಿದಿಲ್ಲ. ಆದರೆ ಎಸ್. ಐ ಟಿ ತನಿಖೆ ಮುಗಿದಿದೆ ಎಂದರು.ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಯಾರೇ ತಪ್ಪು ಮಾಡಿದ್ದರೂ ಮುಲಾಜಿಗೆ ಒಳಗಾಗುವುದಿಲ್ಲ. ಯಾರನ್ನೂ ರಕ್ಷಣ ಮಾಡುವುದಿಲ್ಲ ಎಂದರು. ನಾವು ತಪ್ಪಿತಸ್ಥರಿಗೆ ಶಿಕ್ಷೆ ಕೊಟ್ಟೆ ಕೊಡುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದರು.

ಸದನದ ಹೊರಗೆ ಹೋರಾಟ: ಪಕ್ಷದಲ್ಲಿ ತೀರ್ಮಾನ
ಸದನದಿಂದ ಹೊರಗೆ ಹೋರಾಟ ಮಾಡುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.ಒಂದೇ ಪ್ರಕರಣದ ಬಗ್ಗೆ ಮೂರು ತನಿಖಾ ಸಂಸ್ಥೆಗಳಿಂದ ತನಿಖೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಮೂರು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿವೆ. ಎಸ್.ಐ.ಟಿ ಯನ್ನು 31-5.2024 ರಂದು ರಚಿಸಲಾಗಿದೆ. 3-6-2024 ರಂದು ಸಿಬಿಐ ಗೆ ಬ್ಯಾಂಕ್ ವತಿಯಿಂದ ದೂರು ನೀಡಲಾಗಿದೆ. ಅದರಲ್ಲಿ ಶುಚಿ ಸ್ಮಿತಾ ರಾವುಲ್, ದೀಪಾ ಹಾಗು ಕೃಷ್ಣಮೂರ್ತಿ ಇವರ ಮೇಲೆ ದೂರು ನೀಡಲಾಗಿದೆ. ಜಾರಿ ನಿರ್ದೇಶನಾಲಯ ಸ್ವಯಂ ಪ್ರೇರಣೆಯಿಂದ ಕೆಲಸ ಮಾಡುತ್ತಿದೆ. ಒಂದೇ ಹಗರಣದಲ್ಲಿ ಮೂರು ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿರುವುದು ವಿಶೇಷ. ಮೂರು ತನಿಖಾ ಸಂಸ್ಥೆಗಳು ಒಂದೇ ಪ್ರಕರಣದ ಬಗ್ಗೆ ತನಿಖೆ ಮಾಡುವುದು ಈವರೆಗೆ ನನ್ನ ಅನುಭವಕ್ಕೆ ಬಂದಿರಲಿಲ್ಲ ಎಂದರು.

ತ್ವರಿತ ತನಿಖೆ
ನಾವು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಎಂದು ಹೇಳಿಲ್ಲ. ವಿರೋಧ ಪಕ್ಷದವರು ಪದೇ ಪದೇ 187.33 ಕೋಟಿ ರೂ.ಗಳ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರೆ . ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಂ.ಜಿ ರಸ್ತೆ ಶಾಖೆಯಿಂದ ತೆಲಂಗಾಣಕ್ಕೆ ಹೋಗಿರುವುದು 89.63 ಕೋಟಿ ರೂ.ಗಳು. ಎಸ್. ಐ.ಟಿ ರಚನೆಯಾದ ಮೇಲೆ ತ್ವರಿತವಾಗಿ ತನಿಖೆ ಕೈಗೊಂಡಿದ್ದಾರೆ. ಈಗಾಗಲೇ 12 ಜನರನ್ನು ಬಂಧಿಸಿದ್ದು, ಬೇರೆ ಬೇರೆ ಜನರು ಹಂಚಿಕೊಂಡಿದ್ದ ಮೊತ್ತದಲ್ಲಿ 34 ಕೋಟಿ ರೂಪಾಯಿ ನಗದನ್ನು ಹಿಂಪಡೆದಿದ್ದಾರೆ. 89.63 ಕೋಟಿ . 46 ಕೋಟಿ ರೂ.ಗಳನ್ನು ಫ್ಸ್ತ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್ , ರತ್ನಾಕರ ಬ್ಯಾಂಕ್ ಲೀ., ನಲ್ಲಿ 46 ಕೋಟಿ ರೂಪಾಯಿ ಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.ಒತ್ತು 85.25 ಕೋಟಿ ಹಿಂಪಡೆದು , ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಒಟ್ಟು ಅಕ್ರಮವಾಗಿರುವುದು 85.63 ಕೋಟಿಗಳು. ಎಸ್. ಐ ಟಿ ಅವರು ಶೇ.95% ತನಿಖೆಯನ್ನು ಪೂರ್ಣಗೊಳಿಸಿದ್ದಾರೆ ಎಂದರು.

ಅಕ್ರಮವಾಗಲು ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ, ಉಪವ್ಯವಸ್ಥಾಪಕರು, ಕ್ರೆಡಿಟ್ ಅಧಿಕಾರಿಗಳು ಕಾರಣ ಎಂದು ಬ್ಯಾಂಕಿನಿಂದ ಸೂರು ನೀಡಲಾಗಿದ್ದು ಸಿಬಿಐ ತನಿಖೆ ಮಾಡುತ್ತಿದೆ. ಅವರೇನು ಮಾಡಿದ್ದಾರೆಂದು ತಿಳಿದಿಲ್ಲ. ಇಡಿ ಯವರು ಸ್ವಯಂ ಪ್ರೇರಿತವಾಗಿ ತನಿಖೆ ಪ್ರಾರಂಭ ಮಾಡಿದ್ದು , ನಾಗೇಂದ್ರ ಹಾಗೂ ದದ್ದಲ್ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ. ನಾಗೇಂದ್ರ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ,ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಎಂಬುವರು ಹೇಳಿಕೆಯನ್ನು ಕೊಟ್ಟಿದ್ದರೂ ಇವರೇ ಆದೇಶ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಹಾಗೂ ಇತರೆ ಸಚಿವರ ಹೆಸರನ್ನು ಬರೆದು ಕೊಡುವಂತೆ ಒತ್ತಾಯ ಮಾಡಿದ್ದಾರೆ.

187.33 ಕೋಟಿಗಳಲ್ಲಿ 43.33 ಕೋಟಿ ರೂಪಾಯಿ ಖಜಾನೆಯಿಂದ ಹೋಗಿದೆ. ಅದಕ್ಕೂ ನಮಗೂ ಸಂಬಂಧವಿಲ್ಲ. ನಮ್ಮ ಹಾಗೂ ಆರ್ಥಿಕ ಇಲಾಖೆ ಪಾತ್ರ ಇದರಲ್ಲಿ ಇರುವುದಿಲ್ಲ. ಬಜೆಟ್ ಒಮ್ಮೆ ಅನುಮೋದನೆಯಾದ ಮೇಲೆ ಅನುದಾನ ಕಾರ್ಯದರ್ಶಿಗಳಿಗೆ, ಅಲ್ಲಿಂದ ಅದನ್ನು ನಿರ್ದೇಶಕರಿಗೆ ಹಾಗೂ ನಿರ್ದೇಶಕರು ಅನುದಾನವನ್ನು ವ್ಯವಸ್ಥಾಪಕ ನಿರ್ದೇಶಕರಿಗೆ ಕೊಡುತ್ತಾರೆ. ಇದು ಪ್ರಕ್ರಿಯೆ ಎಂದು ವಿವರಿಸಿದರು

ಕಲ್ಲೇಶ್ ಅವರಿಗೆ ಜೀವ ಬೆದರಿಕೆ
ಜಾರಿ ನಿರ್ದೇನಾಲಯದವರು ಕಲ್ಲೇಶ್ ಅವರಿಗೆ ಹೆದರಿಸಿ, ಬೆದರಿಸಿ, ಜೀವ ಭಯ ಉಂಟು ಮಾಡಿ ಅನಗತ್ಯವಾಗಿ ನನ್ನ ಹೆಸರು ಹೇಳುವಂತೆ ಬೆದರಿಸಿದ್ದಾರೆ. ಪ್ರಕರಣದಲ್ಲಿ ಕಾನೂನಿನ ಪ್ರಕಾರ ನನ್ನ ಮೇಲೆ ಆರೋಪ ಬರುವಂತೆ ಮಾಡಲು ಒತ್ತಾಯಿಸಿದ್ದಾರೆ. ಕಲ್ಲೇಶ್ ದೂರು ನೀಡಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಏನೇನು ನಡೆಯಿತು ಎಂದು ಹೇಳಿದ್ದಾರೆ ಎಂದರು.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement