ಬೆಂಗಳೂರು : ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ ಪಡಿಸುವ ನೌಕರರ ಬೇಡಿಕೆ ಕುರಿತು ಕಾರ್ಮಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘವು ನಾಳೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರ ಬೇಡಿಕೆಗಳನ್ನು ಪೂರೈಸುವ ಭರವಸೆ ನೀಡಿದ್ದು, ನೌಕರರ ಸಂಘ ಸಲ್ಲಿಸಿದ 19 ಬೇಡಿಕೆಗಳ ಕುರಿತು ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ, ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರಗಂಟಿಗಳು ನಿರ್ವಹಿಸುವ ಕೆಲಸಗಳನ್ನು ವಿವಿಧೋದ್ದೇಶ ಎಂದು ನಿಗದಿಪಡಿಸಿರುವುದನ್ನು ಕೈಬಿಟ್ಟು ನಿರ್ದಿಷ್ಟ ಕೆಲಸ ನಿಗದಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.
ನೌಕರರ ಸಂಘದ ಮತ್ತೊಂದು ಬೇಡಿಕೆಯಾದ ಜನಸಂಖ್ಯೆಗೆ ಅನುಗುಣವಾಗಿ ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಚರ್ಚಿಸಿಲಾಗಿದೆ ಎಂದು ತಿಳಿಸಿದ್ದಾರೆ.