ಶಿರೂರು ಬಳಿ ಗುಡ್ಡ ಕುಸಿತ ನಡೆದು ಇಂದಿಗೆ 10 ದಿನಗಳು ಕಳೆದಿದ್ದು, 8 ಜನರ ಮೃತದೇಹ ಪತ್ತೆಯಾಗಿದೆ.
ಇನ್ನುಳಿದ ಮೂವರಿಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು. ಜೊತೆಗೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಗಂಗಾವಳಿ ನದಿಯಲ್ಲಿ ಇರುವುದು ನಿನ್ನೆ ಖಚಿತವಾಗಿದ್ದು, ಬೂಮ್ ಫೋಕ್ಲೇನ್ ಮೂಲಕ ಕಾರ್ಯಾಚರಣೆ ನಡೆಸಲಾಗಿದೆ.
ಇದೀಗ ಘಟನೆಯಲ್ಲಿ ಮತ್ತೋರ್ವ ತಮಿಳುನಾಡು ಮೂಲದ ಲಾರಿ ಚಾಲಕ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದೆ.
ಶರವಣ ನಾಪತ್ತೆ ಆದ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಆಗಿರುವ ಶರವಣ ಅವರ ಮಾವ ಸೆಂದೀಲ್ ಎಂಬುವವರು ದೂರು ದಾಖಲಿಸಿದ್ದಾರೆ.