ಮುಂಬೈ: ಮುಂಬೈ-ಹೌರಾ ಮೇಲ್ ರೈಲಿನ 10 ಬೋಗಿಗಳು ಜಾರ್ಖಂಡ್ನ ಬಡಾಬಂಬೂ ಬಳಿ ಹಳಿ ತಪ್ಪಿದ ಪರಿಣಾಮ ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳಿಗೆ ಬರಬಂಬೂನಲ್ಲಿಯೇ ಪ್ರಥಮ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚಕ್ರಧರಪುರಕ್ಕೆ ಕರೆದೊಯ್ಯಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಆಗ್ನೇಯ ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.