ವಯನಾಡು: ಕಾಂಗ್ರೆಸ್ ವಯನಾಡಿನಲ್ಲಿ ಸಂತ್ರಸ್ತರಿಗಾಗಿ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಾಣ ಮಾಡುತ್ತದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುವ ವಿಷಯವನ್ನು ದೆಹಲಿಯಲ್ಲಿ ಮತ್ತು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಪ್ರಸ್ತಾಪಿಸುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಗುರುವಾರ ವಯನಾಡ್‌ಗೆ ಭೇಟಿ ನೀಡಿ ಭೂಕುಸಿತದಿಂದ ಉಂಟಾದ ವಿನಾಶದ ಪ್ರಮಾಣವನ್ನು ನೋಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದನ್ನು “ರಾಷ್ಟ್ರೀಯ ವಿಪತ್ತು” ಎಂದಿದ್ದರು. ಇದನ್ನು ಎದುರಿಸಲು ತುರ್ತು ಸಮಗ್ರ ಕ್ರಿಯಾ ಯೋಜನೆಗೆ ಒತ್ತಾಯಿಸಿದ್ದರು. ನಮ್ಮ ತಕ್ಷಣದ ಗಮನವು ರಕ್ಷಣೆ, ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳ ಮೇಲೆ ಕೇಂದ್ರೀಕೃತವಾಗಿದೆ. ವಯನಾಡಿನಲ್ಲಿ ೧೦೦ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಹೇಳಿದ್ದಾರೆ.