ಭೋಪಾಲ್ : ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ.
ಶಹಪುರ್ ನಗರದ ಹರ್ದುಲ್ ಬಾಬಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಗೋಡೆ ಕುಸಿದ ಪರಿಣಾಮ 9 ಮಕ್ಕಳು ಸಾವನ್ನಪ್ಪಿದ್ದು, ಹಲವು ಮಕ್ಕಳು ಗಾಯಗೊಂಡಿದ್ದಾರೆ.
ಘಟನೆ ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳೀಯರೊಂದಿಗೆ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನೂ ನಡೆಸಿ ಕೆಲ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಗಾಯಾಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತಪಟ್ಟ ಮಕ್ಕಳು 10-15 ವರ್ಷದೊಳಗಿನವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನೂ ಘಟನೆ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಮೋಹನ್ ಯಾದವ್, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ ಚಿಕಿತ್ಸಾ ನೆರವು ನೀಡುವುದಾಗಿ ಘೋಷಣೆ ಮಾಡಿದ್ದಾರೆ.