ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಾಟ್ ಪ್ಯಾರಿಸ್ ಒಲಿಂಪಿಕ್ಸ್ ಫೈನಲ್ ಪಂದ್ಯದಲ್ಲಿ ಅನರ್ಹರಾಗಿದ್ದಾರೆ. 100 ಗ್ರಾಂ ಹೆಚ್ಚಿನ ತೂಕ ಹೊಂದಿದ್ದ ಕಾರಣ ಅವರನ್ನು ಅನರ್ಹಗೊಳಿಸಲಾಗಿದೆ.
ಈ ವಿಚಾರ ತಿಳಿದು ಪ್ರಧಾನಿ ನರೇಂದ್ರ ಮೋದಿಯವರು ಐಒಎ ಅಧ್ಯಕ್ಷೆ ಪಿಟಿ ಉಷಾ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಸಮಗ್ರ ಮಾಹಿತಿಯನ್ನು ಕೇಳಿದ್ದಾರೆ. ಎಎನ್‌ಐ ಮೂಲಗಳ ಪ್ರಕಾರ, ಪಿಎಂ ಮೋದಿ ಅವರು ಪ್ರಸ್ತುತ ಸಂದರ್ಭಗಳ ಬಗ್ಗೆ ಉಷಾ ಅವರಿಂದ ಮೊದಲ ಮಾಹಿತಿ ಕೇಳಿದ್ದಾರೆ ಜೊತೆಗೆ ಸಮಸ್ಯೆಯನ್ನು ಪರಿಹರಿಸಲು ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಹುಡುಕಲು ಒತ್ತಾಯಿಸಿದ್ದಾರೆ. ಇನ್ನು ಫೋಗಟ್ ಅವರ ಅನರ್ಹತೆಯ ಬಗ್ಗೆ ಉಷಾ ಅವರು ಪ್ರಬಲವಾದ ಪ್ರತಿಭಟನೆಯನ್ನು ದಾಖಲಿಸುವಂತೆ ಸಲಹೆ ನೀಡಿದ್ದು ಅವರ ಪ್ರಕರಣಕ್ಕೆ ಪ್ರಯೋಜನಕಾರಿಯಾಗಿದೆ.