ಬೆಂಗಳೂರು: ಯಾರೇ ಬೈದರೂ ನೀರಿನ ದರ ಹೆಚ್ಚಳ ಮಾಡುತ್ತೇವೆ, ಸಾರ್ವಜನಿಕರು ಬೈದರೂ, ಮೀಡಿಯಾದವರು ಬೈದರೂ, ವಿರೋಧ ಪಕ್ಷದವರು ವಿರೋಧ ಮಾಡಿದರೂ ನಾವು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ ಅಭಿಯಾನಕ್ಕೆ ಚಾಲನೆ ನೀಡಿ ಉಪಮುಖ್ಯಮಂತ್ರಿ ಡಿಕೆಶಿ ಹೇಳಿಕೆ ನೀಡಿದರು.
ನೀರಿನ ದರ ಹಲವು ವರ್ಷಗಳಿಂದ ಏರಿಸಿಲ್ಲ. ಬೆಂಗಳೂರಲ್ಲಿ 1.40 ಕೋಟಿ ಜನಸಂಖ್ಯೆ ಇದೆ. ಮೇಕೆದಾಟು ಯೋಜನೆ ಮೇಲೆ ನನಗೆ ಭರವಸೆ ಇದೆ. ಆದಷ್ಟು ಬೇಗ ಅದು ಆಗಲಿದೆ. ಶರಾವತಿ ಕುಡಿಯುವ ನೀರಿನ ಯೋಜನೆಯು ಇದೆ. ಅದಕ್ಕೆ ಆ ಭಾಗದಲ್ಲಿ ಕೊಂಚ ವಿರೋಧವಿದೆ. ಎತ್ತಿನ ಹೊಳೆ ಯೋಜನೆಯು ಒಂದು ಹಂತದಲ್ಲಿ ಇದೆ ಎಂಬುವುದಾಗಿ ಇದೇ ವೇಳೆ ಹೇಳಿಕೆ ನೀಡಿದರು.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.