ಬೆಂಗಳೂರು : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಪರಮೇಶ್ವರ್ ಇಂದು ದೆಹಲಿಗೆ ತೆರಳಿದ್ದಾರೆ. ವಿಶೇಷ ವಿಮಾನದಲ್ಲಿ ಮೂರು ಜನ ದೆಹಲಿಗೆ ಪ್ರಯಾಣಿಸಿದ್ದಾರೆ. ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ನಡೆದ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಚರ್ಚೆ ನಡೆಸಲಿರುವ ನಾಯಕರು. ಅಲ್ದೇ ನಿನ್ನ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲ ಶಾಸಕರು ರಾಜ್ಯಪಾಲ ನಡೆಯ ಬಗ್ಗೆ ರಾಷ್ಟ್ರಪತಿಗಳಿಗೆ ದೂರು ನೀಡಬೇಕು ಎಂದಿರುವ ಬಗ್ಗೆಯೂ ಚರ್ಚೆ ನಡೆಸಲಿರುವ ನಾಯಕರು. ಪ್ರಮುಖವಾಗಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮುಂದಿನ ಕಾನೂನು ಪ್ರಕ್ರಿಯೆಗಳಲ್ಲಿ ನಡೆಯಬಹುದಾದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಇದ್ರ ನಡುವೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಬಗ್ಗೆ ಈಗಾಗಲೇ ಕಾನೂನು ಹೋರಾಟ ಮುಂದುವರೆಸಿರುವ ಸಿಎಂ ಹೈಕಮಾಂಡ್ ನಾಯಕರ ಭೇಟಿ ಬಳಿಕ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲರನ್ನ ಭೇಟಿಯಾಗುವ ಸಾಧ್ಯತೆ ಇದೆ. ಮೊನ್ನೆ ನಡೆದ ಕೋರ್ಟ್ ವಿಚಾರಣೆಯಲ್ಲಿ ತಮ್ಮ ಪರ ವಾದ ಮಂಡಿಸಲು ಬಂದಿದ್ದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಮತ್ತು ಕಪಿಲ್ ಸಿಬಲ್ ರನ್ನ ಸಹ ಭೇಟಿಯಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಗೆ ಹೈಕಮಾಂಡ್ ಯಾವ ಸಲಹೆ ನೀಡಲಿದೆ, ರಾಷ್ಟ್ರಪತಿಗೆ ದೂರು ನೀಡೋದ್ರ ಬಗ್ಗೆ ಹೈಕಮಾಂಡ್ ಏನು ಹೇಳಲಿದೆ,ಒಂದು ವೇಳೆ ಕಾನೂನು ತೊಡಕಾದ ಸಂದರ್ಭ ಬಂದ್ರೆ ಹೈಕಮಾಂಡ್ ತೀರ್ಮಾನ ಏನಾಗಲಿದೆ ಎಂಬದು ಸಿಎಂ ಡಿಸಿಎಂ ಹೈಕಮಾಂಡ್ ಜೊತೆ ಚರ್ಚೆಯ ಬಳಿಕ ಸ್ಪಷ್ಟತೆ ಸಿಗಲಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ