ಕಿವಿಯ ಒಳಗಡೆ ಶುಚಿಗೊಳಿಸುವಾಗ ಬಹಳ ಜಾಗೃತರಾಗಿರಿ

ಬದುಕಿನಲ್ಲಿ ಆರೋಗ್ಯ ಕಾಳಜಿ ಅತ್ಯಗತ್ಯ. ದೇಹ ಮತ್ತು ಮನಸ್ಸು ಶುಚಿಯಾಗಿದ್ದರೆ ದೈನಂದಿನ ಬದುಕು ತುಂಬಾನೆ ಸೊಗಸಾಗಿರುತ್ತದೆ.

ಈ ನಿಟ್ಟಿನಲ್ಲಿ ದೈಹಿಕ ಆರೋಗ್ಯ ಶುಚಿಯಲ್ಲಿ ಅನೇಕರು ಕಿವಿ ಶುಚಿತ್ವಕ್ಕೆ ಕೂಡ ಮಹತ್ವ ನೀಡುತ್ತಾರೆ. ಹೀಗಾಗಿ ಕಿವಿ ಸ್ವಚ್ಛತೆಗಾಗಿ ಅನೇಕರು ಕಿವಿಯೊಳಗೆ ಪಿನ್‌ ಹಾಕುವುದು, ಬಡ್ಸ್‌ ಹಾಕುವುದು, ನೀರು ಅಥವಾ ಸೋಪಿನ ನೀರನ್ನು ಹಾಕಿ ಸ್ವಚ್ಛಗೊಳಿಸಲು ಮುಂದಾಗುತ್ತಾರೆ. ಇದರಿಂದಾಗಿ ವಿವಿಧ ಸಮಸ್ಯೆಗಳು ಎದುರಾಗುತ್ತವೆ. ಕಿವಿಯು ಸ್ವಯಂ ಶುಚಿಗೊಳಿಸುವ ಕಾರ್ಯವಿಧಾನವನ್ನು ಹೊಂದಿದೆ. ಹೀಗಾಗಿ ಕಿವಿಯಲ್ಲಿರುವ ವ್ಯಾಕ್ಸ್‌ ಕಾಲಕ್ರಮೇಣ ತನ್ನಿಂದ ತಾನೆ ಹೊರಬರುತ್ತದೆ.

ಹಾಗಾಗಿ ನಾವು ಪ್ರತಿದಿನ ಕಿವಿಯನ್ನು ಸ್ವಚ್ಛಗೊಳಿಸಬೇಕಾಗಿಲ್ಲ. ಅದಾಗ್ಯೂ ಕಿವಿ ಸ್ವಚ್ಚಗೊಳಿಸಬೇಕೆಂದರೆ ಒಂದು ಮೃದು ಬಟ್ಟೆಯಿಂದ ಸ್ವಚ್ಚಗೊಳಿಸಿದರೆ ಸಾಕು ಎನ್ನುತ್ತಾರೆ ತಜ್ಞರು. ಶುಚಿ ಮಾಡುವ ವೇಳೆ ಸ್ವಲ್ಪ ತಪ್ಪಾದರೂ ಅದರಿಂದ ತೊಂದರೆ ಆಗಬಹುದು. ಇದರಿಂದ ಶ್ರವಣ ದೋಷ ಕಂಡಬರಬಹುದು. ಸೋಂಕು ಕೂಡ ಕಿವಿಯ ಒಳಭಾಗಕ್ಕೆ ತಲುಪುವ ಸಾಧ್ಯತೆಯು ಇರುವುದು. ಇದರಿಂದ ಪಿನ್, ಪೆನ್ಸಿಲ್, ಪೆನ್, ಕೀ ಇತ್ಯಾದಿಗಳನ್ನು ಬಳಸಬಾರದು. ಕೆಲವು ಇಯರ್ ಬಡ್ಸ್ ನ್ನು ಬಳಕೆ ಮಾಡುವರು. ಆದರೆ ಇದು ಕೂಡ ಹಾನಿ ಉಂಟು ಮಾಡುವುದು. ವೈದ್ಯರ ಪ್ರಕಾರ ಇಯರ್ ಬಡ್ ಮೇಣವನ್ನು ಇನ್ನಷ್ಟು ಒಳಗೆ ತಳ್ಳುವುದು. ಇದರಿಂದಾಗಿ ಕಿವಿಯ ತಮಟೆಗೆ ಹಾನಿ ಆಗಬಹುದು. ಕಿವಿಗೆ ಯಾವುದೇ ದ್ರಾವಣವನ್ನು ಸಿಂಪಡಣೆ ಮಾಡಲು ಹೋಗಬೇಡಿ.

Advertisement

ನೀರು ಅಥವಾ ಯಾವುದೇ ದ್ರಾವಣವು ಕಿವಿಯ ಚರ್ಮಕ್ಕೆ ಹಾನಿ ಉಂಟು ಮಾಡುವುದು. ತಲೆ ಸ್ನಾನ ಮಾಡುವಾಗ ಕಿವಿ ಹೊರಭಾಗದಲ್ಲಿ ವ್ಯಾಸಲಿನ್‌ ಲೇಪಿತ ಹತ್ತಿಯನ್ನು ಕಿವಿಯ ಮುಂಭಾಗದಲ್ಲಿ ಇರಿಸಿ , ಕಿವಿಯಲ್ಲಿ ಕಡಿತ ಉಂಟಾದರೆ ಕೇವಲ ವ್ಯಾಕ್ಸ್‌ನಿಂದಲೇ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಕೆಲವೊಮ್ಮೆ ಒಣಗುವಿಕೆ ಮತ್ತು ಅಲರ್ಜಿಯಿಂದಲೂ ಕೂಡ ಕಿವಿಯಲ್ಲಿ ಸಮಸ್ಯೆಗಳು ಕಂಡುಬರುತ್ತವೆ. ಹೀಗಾಗಿ ಕಿವಿಯಲ್ಲಿ ಸ್ವತಃ ಯಾವುದೇ ಔಷಧಿಗಳನ್ನು ಲೇಪಿಸಬೇಡಿ.

ಶೀತದ ಸಂದರ್ಭದಲ್ಲಿ ನಿಮ್ಮ ಕಿವಿ ಬ್ಲಾಕ್‌ ಆಗಿದ್ದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ, ಕಿವಿಯ ಹೊರಭಾಗದಲ್ಲಿ ಏನಾದರು ಕಸ ಕಂಡುಬಂದಲ್ಲಿ ನೀವೇ ಸ್ವತಃ ಮೃದು ಬಟ್ಟೆಯಿಂದ ಒರೆಸಿ ಸ್ವಚ್ಛಗೊಳಿಸಿ. ಕಿವಿ ಶುಚಿಗಾಗಿ ಏನೆಲ್ಲಾ ಮಾಡಬಾರದು.. ? ಪ್ರತಿದಿನ ಬೆಳಗೆದ್ದು ಕಿವಿ ಶುಚಿಗೊಳಿಸುವುದನ್ನೇ ಅಭ್ಯಾಸ ಮಾಡಬೇಡಿ, ಕಿವಿ ಶುಚಿಗಾಗಿ ಕಿವಿಯಲ್ಲಿ ಬಡ್ಸ್‌, ಪಿನ್‌, ಬೆರಳು ಹಾಕುವುದು ಮತ್ತು ಇತರೆ ವಸ್ತುಗಳನ್ನು ಹಾಕದಿರಿ, ಕಿವಿಯಲ್ಲಿ ಏನೇ ಸಮಸ್ಯೆಗಳು ಕಂಡುಬಂದರೆ ಸ್ವತಃ ಯಾವುದೇ ಔಷಧಗಳನ್ನು ಬಳಸಲು ಮುಂದಾಗದಿರಿ. ಡಯಾಬಿಟಿಕ್‌ ರೋಗಿಗಳಲ್ಲಿ ಕಿವಿ ಸಂಬಂಧಿ ಸಮಸ್ಯೆಗಳು ಕಂಡುಬಂದಲ್ಲಿ ಹೆಚ್ಚಿನ ಮುತುವರ್ಜಿವಹಿಸಿ, ಕಿವಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವವರು ಯಾವುದೇ ನೀರಿನ ಚಟುವಟಿಕೆಗಳಿಂದ ದೂರವಿರಿ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement