ಕಾಂಗ್ರೆಸ್ ಕಾರ್ಯಕರ್ತರಿಗೆ ಖುಷಿ ಆಗುವ ಸುದ್ದಿ ಇಲ್ಲಿದೆ.!

 

ಬೆಂಗಳೂರು: ಗೃಹ ಸಚಿವ ಜಿ. ಪರಮೇಶ್ವರ ನೇತೃತ್ವದ ಆಯ್ಕೆ ಸಮಿತಿಯು ವಿವಿಧ ನಿಗಮ– ಮಂಡಳಿಗಳ ನಿರ್ದೇಶಕ, ಸದಸ್ಯ ಸ್ಥಾನಗಳಿಗೆ ಒಂದು ಸಾವಿರಕ್ಕೂ ಕಾಂಗ್ರೆಸ್ ಕಾರ್ಯಕರ್ತರನ್ನು ಶೀಘ್ರದಲ್ಲಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.!

ರಾಜ್ಯದಲ್ಲಿರುವ 80ಕ್ಕೂ ಹೆಚ್ಚು ನಿಗಮ ಮಂಡಳಿಗಳಲ್ಲಿ 1,140 ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡಲು ಉದ್ದೇಶಿಸಲಾಗಿದೆ. ಇದೇ 13ರ ಒಳಗೆ ಸಂಭವನೀಯರ ಪಟ್ಟಿ ಸಿದ್ಧಪಡಿಸಿ, ನೇಮಕ ಪ್ರಕ್ರಿಯೆ ನಡೆಸಲಾಗುವುದು ಎಂದು ಸಮಿತಿಯ ಸದಸ್ಯರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ತಿಳಿಸಿದ್ದಾರೆ.

Advertisement

ವಿವಿಧ ವಿಶ್ವವಿದ್ಯಾಲಯಗಳ ಸಿಂಡಿಕೇಟ್ಗಳಿಗೆ ಸದಸ್ಯರ ನೇಮಕವೂ ಸೇರಿದಂತೆ ಇತ್ತೀಚೆಗೆ ನಡೆದ ಕೆಲವು ನೇಮಕಾತಿಗಳಿಗೆ ಕಾಂಗ್ರೆಸ್ ಪಕ್ಷದ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನಿಗಮ – ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಗೆ ರಚಿಸಿದ ಸಮಿತಿಯ ಸಭೆ ವಿಧಾನಸೌಧದಲ್ಲಿ ಮಂಗಳವಾರ ನಡೆಯಿತು.

ಸಚಿವರಾದ ಸತೀಶ ಜಾರಕಿಹೊಳಿ, ಸಂತೋಷ್ ಲಾಡ್, ಜಿ.ಸಿ. ಚಂದ್ರಶೇಖರ್, ಶಾಸಕರಾದ ರಿಜ್ವಾನ್ ಹರ್ಷದ್, ರೂಪಕಲಾ ಶಶಿಧರ್, ಮುಖಂಡರಾದ ವಿ.ಆರ್. ಸುದರ್ಶನ್, ಎಂ.ಹರೀಶ್ ಕುಮಾರ್ ಸಭೆಯಲ್ಲಿದ್ದರು. ಆಯ್ಕೆ ಪ್ರಕ್ರಿಯೆಗೆ ನಿರ್ದಿಷ್ಟ ಮಾನದಂಡಗಳನ್ನು ರೂಪಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಹಾಗಾಗಿ ಶೀಘ್ರದಲ್ಲಿಯೇ ಕಾರ್ಯಕರ್ತರಿಗೆ ಸ್ಥಾನ ಸಿಗಲಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement