ಜಾತ್ರಾ ರಥಕ್ಕೆ  ಸಿಲುಕಿ ಯುವಕ ಸಾವು.!

 

ವಿಜಾಯಪುರ; ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ನಡೆದಿದೆ.

ಮೃತ ದೇವೇಂದ್ರ ಬಡಿಗೇರ್ (24). ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಘಟನೆಯಾಗಿದ್ದು, ದುರಂತದ ದೃಶ್ಯ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Advertisement

ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದನು. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಜೀವ ಹೋಗಿದೆ. ಕಲಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement