‘840 ನೂತನ‌ ಬಸ್ ಗಳು BMTC ಸೇರಲಿವೆ’- ಸಿಎಂ ಸಿದ್ದರಾಮಯ್ಯ

ಬೆಂಗಳೂರು :ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ಬಸ್ ಗಳನ್ನು BMTC ಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ.

ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು.

Advertisement

ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದರು.

ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ ಎಂದರು.

ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದರು.‌

ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ ಎಂದರು. ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement