ಹಿಜ್ಬುಲ್ಲಾ ಸದಸ್ಯರ ಅಂತ್ಯಕ್ರಿಯೆ ವೇಳೆ ಮತ್ತೊಂದು ಸ್ಫೋಟ

WhatsApp
Telegram
Facebook
Twitter
LinkedIn

ಲೆಬನಾನ್ : ಇಸ್ರೇಲಿ ಗುಪ್ತಚರ ಸಂಸ್ಥೆಯು ಸಿರಿಯಾ ಹಾಗೂ ಲೆಬನಾನ್ ನಗರಗಳಲ್ಲಿ ಹಿಜ್‌ಬುಲ್ಲಾ ಭಯೋತ್ಪಾದಕರ ತಾಣಗಳ ಮೇಲೆ ಬಾಂಬ್ ದಾಳಿ ಮಾಡಿದ ಪರಿಣಾಮ ಸುಮಾರು ಎರಡು ಸಾವಿರ ಉಗ್ರರು ಗಾಯಗೊಂಡಿದ್ದಾರೆ. ಸಾಕಷ್ಟು ಸಾವು ಸಂಭವಿಸಿದೆ ಇನ್ನು ಈ ದಾಳಿಯಲ್ಲಿ ಸತ್ತ ಹಿಜ್‌ಬುಲ್ಲಾ ಭಯೋತ್ಪಾದಕರ ಅಂತ್ಯಕ್ರಿಯೆ ಸಂದರ್ಭದಲ್ಲಿ ಮತ್ತೊಂದು ಸ್ಫೋಟ ಗೊಂಡಿದೆ. ಹೌದು ಲೆಬನಾನ್​ನಲ್ಲಿ ಹಿಜ್ಬುಲ್ಲಾಗಳು ಬಳಸುತ್ತಿದ್ದ ಪೇಜರ್​ಗಳ ಸ್ಫೋಟ ಬೆನ್ನಲ್ಲೇ ಅವರ ವಾಕಿ-ಟಾಕಿಗಳು ಕೂಡ ಸ್ಫೋಟಗೊಂಡಿದ್ದು 20ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಲೆಬನಾನ್​ನಲ್ಲಿ ಹಿಜ್ಬುಲ್ಲಾ ಬಳಸುತ್ತಿದ್ದ ಪೇಜರ್​ಗಳ ಸರಣಿ ಸ್ಫೋಟದಿಂದ 9ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದರು. ಹಿಜ್ಬುಲ್ಲಾ ಸದಸ್ಯರ ಅಂತ್ಯಕ್ರಿಯೆಗೆ ತೆರಳಿದ್ದ ವೇಳೆ ವಾಕಿ-ಟಾಕಿಗಳು ಕೂಡ ಸ್ಫೋಟಗೊಂಡಿವೆ. ದಾಳಿಗಳ ಹಿಂದೆ ಇಸ್ರೇಲ್ ಕೈವಾಡವಿರುವ ಬಗ್ಗೆ ಆರೋಪ ಕೇಳಿಬಂದಿದೆ. ಇಸ್ರೇಲ್ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಹಿಜ್ಬುಲ್ಲಾ ಎಚ್ಚರಿಕೆ ನೀಡಿದೆ. ಕಳೆದ ಅಕ್ಟೋಬರ್‌ನಿಂದ ಹಿಜ್ಬುಲ್ಲಾ ನಾಯಕರ ಮೇಲೆ ಗುರಿಯಿಟ್ಟು ಇಸ್ರೇಲ್‌ ದಾಳಿ ನಡೆಸುತ್ತಿತ್ತು. ಸ್ಮಾರ್ಟ್‌ಫೋನ್‌ ಬಳಕೆಯಿಂದ ನಮ್ಮ ಮಾಹಿತಿಗಳು ಸೋರಿಕೆಯಾಗಿ ಇಸ್ರೇಲ್‌ ದಾಳಿ ಮಾಡುತ್ತಿದೆ ಎಂದು ಅರಿತ ಹಿಜ್ಬುಲ್ಲಾ ಫೋನ್‌ ಬಳಸದೇ ಸಂವಹನಕ್ಕಾಗಿ ಪೇಜರ್‌ ಬಳಸುತ್ತಿತ್ತು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

BC Suddi   About Us
For Feedback - [email protected]

Related News

LATEST Post

WhatsApp Icon Telegram Icon