ಕಲಾವಿದರ ಮಾಸಾಶನ 3000 ರೂ.ಗೆ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

WhatsApp
Telegram
Facebook
Twitter
LinkedIn

ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಅಲ್ಲದೇ ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೇಡಿಕೆಯಂತೆ ಅಕಾಡೆಮಿಗಳ ಮೊತ್ತವನ್ನು ಹೆಚ್ಚಿಸುವ ಜೊತೆಗೆ ಕಲಾವಿದರ ಮಾಸಾಶನವನ್ನು 2500 ರೂಗಳಿಂದ 3000 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು. ಬಿಜೆಪಿ ಸರ್ಕಾರ ಕಲೆ ಸಂಸ್ಕೃತಿಗೆ ದ್ರೋಹ ಬಗೆದು ಪ್ರಶಸ್ತಿ ವಿತರಣೆ ನಿಲ್ಲಿಸಿತ್ತು. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು ಎಂದು ಸಿಎಂ ಸೂಚನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ, ಜೀವಮಾನದ ಸಾಧನೆ ಪ್ರಶಸ್ತಿ ಪುರಸ್ಕೃತರಾದ ಡಾ.ಉಮಾಶ್ರೀ, ಪ್ರೊ.ಎಚ್.ಎಸ್.ಶಿವಪ್ರಕಾಶ್, ಕೋಟಿಗಾನಲ್ಲಿ ರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ.ಧರಣೀದೇವಿ ಮಾಲಗತ್ತಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

BC Suddi   About Us
For Feedback - [email protected]

Related News

LATEST Post

WhatsApp Icon Telegram Icon