‘ರಾಜ್ಯಪಾಲರ ಕಛೇರಿಯಿಂದಲೇ ಮಾಹಿತಿ ಸೋರಿಕೆಯಾಗಿರಬಹುದು’ – ಮುಖ್ಯಮಂತ್ರಿ ಸಿದ್ದರಾಮಯ್ಯ

WhatsApp
Telegram
Facebook
Twitter
LinkedIn

ಕೊಪ್ಪಳ: ಅರ್ಕಾವತಿ ಬಡಾವಣೆ ಬಗ್ಗೆ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದರೆ ಸರ್ಕಾರ ಈ ಬಗ್ಗೆ ಗಮನಹರಿಸಲಿದೆ  ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೊಪ್ಪಳದ ಗಿಣಿಗೇರಾ ಏರ್ ಸ್ಟ್ರಿಪ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,ಅರ್ಕಾವತಿ ಬಡಾವಣೆ ಬಗ್ಗೆ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದರೆ ಸರ್ಕಾರ ಈ ಬಗ್ಗೆ ಗಮನಹರಿಸಲಿದೆ ಎಂದರು. ರಾಜ್ಯಪಾಲರ ಸೋರಿಕೆಯಾಗಿದೆ ಎಂಬ ಬಗ್ಗೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ರಾಜ್ಯಪಾಲರ ಕಛೇರಿಯಿಂದಲೇ ಸೋರಿಕೆಯಾಗಿರಬಹುದು ಎಂದರು.ಈ ಬಗ್ಗೆ ತನಿಖೆಯಾಗಲಿ ಎಂದರು. ಈ ಬಗ್ಗೆ ಪತ್ರಿಕೆಯಲ್ಲಿ ಓದಿ ತಿಳಿದಿದ್ದೇನೆ ಎಂದರು. ರೀಡೂ ಮಾಡಿ ಎಂದು ಬಿಡಿಎ ಗೆ ಸುಪ್ರೀಂ ಕೋರ್ಟ್ ಹೇಳಿದೆ ಎಂದರು.

ಕ್ರಸ್ಟ್ ಗೇಟ್ ಗಳ ಕಾಲಕಾಲಕ್ಕೆ ದುರಸ್ತಿ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು 50 ವರ್ಷಕ್ಕೆ ಗೇಟ್ ಗಳನ್ನು ಬದಲಿಸಬೇಕು. 70 ವರ್ಷಗಳಿಂದ ಗೇಟ್ ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಉತ್ತಮ ನಿರ್ವಹಣೆ ಮಾಡಿರುವುದರಿಂದ 70 ವರ್ಷ ಕೆಲಸ ಮಾಡಿದೆ. ಪ್ರಸ್ತುತ ತಜ್ಞರ ಸಮಿತಿ ರಚನೆಯಾಗಿದ್ದು ವರದಿ ನೀಡಬೇಕಿದೆ ಎಂದರು.

ಹಿಂಗಾರಿನ ಎರಡನೇ ಬೆಳೆಗೆ ನೀರು ಲಭ್ಯವಾಗಬಹುದು: 
ತುಂಗಭದ್ರ ಜಲಾಶಯ ಮತ್ತೆ ತುಂಬಿದೆ. 101.77 ಟಿ.ಎಂ.ಸಿ ನೀರು ಲಭ್ಯವಿದೆ. ಮುಂಗಾರು ಮತ್ತು ಹಿಂಗಾರು ಬಿತ್ತನೆಗೆ ನೀರು ಸಿಗಲಿದೆ.ಕೊಚ್ಚಿಹೋಗಿದ್ದ 19 ನೇ ಕ್ರಸ್ಟ್ ಗೇಟ್ ನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ , ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್ ಅವರು ಸ್ಥಳದಲ್ಲಿಯೇ ಇದ್ದು ಗೇಟ್ ದುರಸ್ತಿ ಗೆ ಕ್ರಮ ವಹಿಸಿದರು.

ತಜ್ಞ ಕನ್ನಯ್ಯ ನಾಯ್ಡು ಅವರ ನೇತೃತ್ವದಲ್ಲಿ, ಜಿಂದಾಲ್, ನಾರಾಯಣ್ ಇಂಜಿನಿಯರಿಂಗ್ ಹಾಗೂ ಇಂಜಿನಿಯರ್ ಗಳು, ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡಿದ್ದರಿಂದ ಆದಷ್ಟು ತ್ವರಿತವಾಗಿ ಗೇಟ್ ಅಳವಡಿಸಲು ಸಾಧ್ಯವಾಯಿತು. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಯಿತು. 20 ಕ್ಕೂ ಹೆಚ್ಚು ಟಿ.ಎಂ.ಸಿ ನೀರು ಉಳಿಯಿತು. ಬೆಳೆಗೆ ನೀರು ಸಿಗುತ್ತದೋ ಇಲ್ಲವೋ ಎಂಬ ರೈತರ ಆತಂಕ ನಿವಾರಣೆಯಾಗಿದೆ. ಹಿಂಗಾರಿನ ಬೆಳೆಗೆ ಯಾವುದೇ ತೊಂದರೆ ಇಲ್ಲ. ಎರಡನೇ ಬೆಳೆಗೆ ನೀರು ಒದಗಿಸಲು ಪ್ರಯತ್ನಿಸಲಾಗುವುದು.101 ಟಿಎಂಸಿ ಲಭ್ಯವಿರುವುದರಿಂದ ನೀರು ಲಭ್ಯವಾಗಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಹಾಲಿನ ದರ ಹೆಚ್ಚು ಮಾಡಿದರೆ ಅದು ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲಾಗುವುದು ಮಾಗಡಿಯಲ್ಲಿ ಬಹಳ ಶಾಸಕರು, ರೈತರು ಹಸು ಸಾಕಣೆಯ ವೆಚ್ಚ ಹೆಚ್ಚಾಗಿದ್ದು ಹಾಲಿನ ದರ ಹೆಚ್ಚಳ ಮಾಡಲು ಒತ್ತಾಯ ಮಾಡಿದರು. ಒಂದು ವೇಳೆ ಹಾಲಿನ ದರ ಹೆಚ್ಚಿಸುವ ಬಗ್ಗೆ ತೀರ್ಮಾನವಾದರೆ ಅದನ್ನು ಸಂಪೂರ್ಣವಾಗಿ ರೈತರಿಗೆ ಕೊಡಬೇಕೆಂದು ಹೇಳಿದ್ದೇನೆ ಎಂದರು.ಹಾಲಿನ ದರ ಹೆಚ್ಚು ಮಾಡಿದರೆ ಅದನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಬೇಕೆಂದು ಸೂಚಿಸಲಾಗಿದೆ ಎಂದರು.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon