ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂಕಲ್ಪ ಏನು.?

WhatsApp
Telegram
Facebook
Twitter
LinkedIn

 

ಚಿತ್ರದುರ್ಗ : ರಾಜ್ಯದಲ್ಲಿ ಬಿಜೆಪಿ.ಯನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುವತನಕ ಮನೆಯಲ್ಲಿ ಕೂರುವುದಿಲ್ಲವೆಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂಕಲ್ಪ ತೊಟ್ಟರು.

ಮಾಳಪ್ಪನಹಟ್ಟಿ ಸಮೀಪವಿರುವ ತಿರುಮಲ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾಪಾರ್ಟಿ ಚಿತ್ರದುರ್ಗ ಜಿಲ್ಲೆ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸದಸ್ಯತ್ವಾ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ದೇಶದ ಪ್ರಧಾನಿ ನರೇಂದ್ರಮೋದಿ ಕಳೆದ 2 ರಂದು ಸದಸ್ಯತ್ವಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಪ್ರತಿ ಬೂತ್ನಲ್ಲಿ ಐದಾರು ಜನರ ತಂಡ ಮಾಡಿಕೊಂಡು ಮನೆ ಮನೆಗೆ ಹೋಗಿ ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದವರು, ಎಲ್ಲಾ ಜಾತಿ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸದಸ್ಯತ್ವಾ ಅಭಿಯಾನ ಯಶಸ್ವಿಗೊಳಿಸುವಂತೆ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಲ್ಲಿ ವಿನಂತಿಸಿದ ಬಿ.ವೈ.ವಿಜಯೇಂದ್ರ ಶಕ್ತಿ ಕೇಂದ್ರ, ಮಹಾ ಶಕ್ತಿ ಕೇಂದ್ರಕ್ಕೆ ಶಾಸಕರು, ಮಾಜಿ ಶಾಸಕರುಗಳು, ಮುಖಂಡರುಗಳು ಪ್ರವೇಶಿಸಬೇಕೆಂದು ಸೂಚಿಸಿದರು.

ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ, ಬಸವರಾಜ್ಬೊಮ್ಮಾಯಿ ಇವರುಗಳು ಮುಖ್ಯಮಂತ್ರಿಗಳಾಗಿದ್ದಾಗ ಕಾಂಗ್ರೆಸ್ನಿಂದ ಅನೇಕ ಆಪಾದನೆಗಳನ್ನು ಎದುರಿಸಿ ಅಧಿಕಾರ ಕಳೆದುಕೊಳ್ಳುವಂತಾಯಿತು. ಈಗ ನಮ್ಮ ಪಕ್ಷ 66 ಸ್ಥಾನಗಳಲ್ಲಿ ಗೆದ್ದು ವಿಧಾನಸಭೆಯಲ್ಲಿ ವಿರೋಧ ಪಕ್ಷದಲ್ಲಿ ಕುಳಿತಿದೆ. ಚುನಾವಣೆ ಪೂರ್ವದಲ್ಲಿ ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ.

ಸಂಸದ ಗೋವಿಂದ ಕಾರಜೋಳ ,ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿದರು. ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಭೀಮಸಮುದ್ರದ ಜಿ.ಎಸ್.ಅನಿತ್ಕುಮಾರ್, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಗೌಡ, ಶರಣ ತಳ್ಳಿಕೆರಿ, ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ.ಸುರೇಶ್ಸಿದ್ದಾಪುರ, ಸಂಪತ್ಕುಮಾರ್, ಮಧುಗಿರಿ ಜಿಲ್ಲಾ ಬಿಜೆಪಿ. ಅಧ್ಯಕ್ಷ ಹನುಮಂತೆಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಎಸ್.ಲಿಂಗಮೂರ್ತಿ, ಬಿಜೆಪಿ

BC Suddi   About Us
For Feedback - [email protected]

Related News

LATEST Post

WhatsApp Icon Telegram Icon