ದಾವಣಗೆರೆ ಪ್ರಸಕ್ತ ಸಾಲಿನ ಕೈಮಗ್ಗ, ವಿದ್ಯುತ್ ಮಗ್ಗ, ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ನೋಂದಣಿಯಾಗಿರುವ ನೇಕಾರರಿಗೆ ನೇಕಾರ ಸಮ್ಮಾನ ಯೋಜನೆಯಡಿ ವಾರ್ಷಿಕವಾಗಿ ರೂ. 5 ಸಾವಿರ ಸಹಾಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರು ಸೇವಾಸಿಂಧು ಪೆÇೀರ್ಟಲ್‍ನಲ್ಲಿ ನೋಂದಾಯಿಸಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಅಕ್ಟೋಬರ್ 20 ರೊಳಗಾಗಿ ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಗೆರೆ ರಾಮಾಂಜನೇಯ ಪ್ಲಾಜಾ, ಕಾಲೇಜ್ ರಸ್ತೆ, ನಿಟ್ಟುವಳ್ಳಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08192-262362 ಸಂಖ್ಯೆಗೆ ಕರೆ ಮಾಡಲು ತಿಳಿಸಲಾಗಿದೆ.