ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ: ಜಂಬೂಸವಾರಿ ನಡೆಯುವ ಸಮಯ ಇಲ್ಲಿದೆ

WhatsApp
Telegram
Facebook
Twitter
LinkedIn

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ಕ್ಕೆ ಬೆರಳೆಣಿಕೆಯಷ್ಟು ದಿನಗಳು ಬಾಕಿ ಇವೆ. ಮೈಸೂರು ದಸರಾ ಕಾರ್ಯಕ್ರಮದ ಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. ಅಕ್ಟೋಬರ್​ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ. ಅಕ್ಟೋಬರ್​ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ (ಜಂಬೂ ಸವಾರಿ)ಗೆ ಚಾಲನೆ ದೊರೆಯಲಿದೆ. ಸಂಜೆ 7ಕ್ಕೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್​ ಅನ್ನು ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ. ಈ ಬಾರಿ ಯುವ ದಸರಾವನ್ನು ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 5 ಗಂಟೆಯಿಂದ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ. ಯುವ ದಸರಾಗೆ ಹೋಗಲು ನಗರದ ಪ್ರಮುಖ ಸ್ಥಳಗಳಿಂದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಲಭ್ಯವಿವೆ. ಸಾರ್ವಜನಿಕ ಬಸ್‌ಗಳು ನಿಯಮಿತವಾಗಿ ಈ ಪ್ರದೇಶಕ್ಕೆ ಓಡುತ್ತವೆ (ಸ್ಥಳೀಯ ವೇಳಾಪಟ್ಟಿಗಳನ್ನು ಪರಿಶೀಲಿಸಿ) ಖಾಸಗಿ ವಾಹನದಲ್ಲಿ ಹೋಗುವವರಿಗೆ ಕಾರ್ಯಕ್ರಮ ನಡೆಯವ ಹತ್ತಿರ ಪಾರ್ಕಿಂಗ್ ವ್ಯವಸ್ಥೆ ಇದೆ. ಮೈಸೂರು ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಮೈಸೂರು ಜಿಲ್ಲೆ ದಸರಾ ಗೋಲ್ಡ್ ಕಾರ್ಡ್-2024 ಬಿಡುಗಡೆ ಮಾಡಿದ್ದಾರೆ. ನಾಡಹಬ್ಬ ಮೈಸೂರು ದಸರಾ-2024ರ ಜಂಬೂಸವಾರಿ ಹಾಗೂ ಪಂಜಿನ ಕವಾಯತು ವೀಕ್ಷಣೆಗೆ ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್‌ಗಳ ಮಾರಾಟದ ಬಗ್ಗೆ ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ದಸರಾ ಕಾರ್ಯಕ್ರಮಗಳ ವೀಕ್ಷಣೆಗೆ ಮೈಸೂ ದಸರಾ-2024ರ ಅಧಿಕೃತ ಜಾಲತಾಣ https://www.mysoredasara.gov.in/ ರಲ್ಲಿ ದಿನಾಂಕ 26.09.2024 ರಿಂದ 30.09.2024ರ ವರೆಗೆ 5 ದಿನಗಳ ಕಾಲ ಆನ್‌ಲೈನ್ ಮೂಲಕ ಖರೀದಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಸಾರ್ವಜನಿಕರು ಸೌಲಭ್ಯದ ಸದುಪಯೋಗ ಪಡೆದುಕೊಂಡು ಟಿಕೆಟ್‌ಗಳನ್ನು ಖರೀದಿಸಬಹುದಾಗಿರುತ್ತದೆ. ಟಿಕೆಟ್‌ಗಳ ದರ ಹಾಗೂ ಸೌಲಭ್ಯ ವಿವರ ಟಿಕೆಟ್ ಮಾರಾಟ ಪ್ರಾರಂಭದ ದಿನಾಂಕ 26.09.2024 * ಟಿಕೆಟ್‌ಗಳನ್ನು ಮೈಸೂರು ದಸರಾ-2024ರ ಅಧಿಕೃತ ಜಾಲ ತಾಣ https://www.mysoredasara.gov.in/ ಮೂಲಕ ಖರೀದಿಸಿ ಅರಮನೆ ಆವರಣದೊಳಗೆ ಜಂಬೂ ಸವಾರಿ ವೀಕ್ಷಣೆಗೆ ಟಿಕೆಟ್ ಮೊತ್ತ ರೂಪಾಯಿ 3,500 ಒಬ್ಬರಿಗೆ (ಜಂಬೂ ಸವಾರಿ ವೀಕ್ಷಣೆಗೆ ಮಾತ್ರ ಅವಕಾಶ) ಪಂಜಿನ ಕವಾಯತು ಟಿಕೆಟ್ ಮೊತ್ತ 1000 ರೂ. (ಒಬ್ಬರಿಗೆ) ಗೋಲ್ಡ್ ಕಾರ್ಡ್ ಮೊತ್ತ 6,500 ರೂ. (ಒಬ್ಬರಿಗೆ) ಗೋಲ್ಡ್‌ ಕಾರ್ಡ್ ಹೊಂದಿರುವವರಿಗೆ ಜಂಬೂಸವಾರಿ, ಪಂಜಿನ ಕವಾಯತು, ಚಾಮುಂಡಿ ಬೆಟ್ಟ, ಚಾಮರಾಜೇಂದ್ರ ಮೃಗಾಲಯ, ಅರಮನೆಗೆ ವೀಕ್ಷಣೆಗೆ ಮಾತ್ರ ಅವಕಾಶ. ಒಂದು ಗೋಲ್ಡ್ ಕಾರ್ಡ್/ ಟಿಕೆಟ್‌ನಲ್ಲಿ ಒಬ್ಬರಿಗೆ ಮಾತ್ರ ಪ್ರವೇಶಾವಕಾಶ ಇರುತ್ತದೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon