ಮೈಹಾರ್: ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಜನರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಮೈಹಾರ್ ನಡೆದಿದೆ.
ಜಿಲ್ಲೆಯ ನಾದನ್ ದೆಹತ್ ಪೊಲೀಸ್ ಠಾಣೆಯ ಬಳಿ ಈ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಪ್ರಯಾಗ್ರಾಜ್ನಿಂದ ನಾಗ್ಪುರಕ್ಕೆ ತೆರಳುತ್ತಿದ್ದ ಬಸ್ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಲ್ಲು ತುಂಬಿದ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಆರು ಮಂದಿಯನ್ನು ಸತ್ನಾಗೆ ಕಳುಹಿಸಲಾಗಿದೆ
ಗಾಯಗೊಂಡವರಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸತ್ನಾಕ್ಕೆ ಕಳುಹಿಸಲಾಗಿದೆ ಎಂದು ಮೈಹಾರ್ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಅಗರ್ವಾಲ್ ತಿಳಿಸಿದ್ದಾರೆ. ಉಳಿದ ಗಾಯಾಳುಗಳು ಮೈಹಾರ್ ಮತ್ತು ಅಮರ್ಪಟಾನ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.