ಬೆಂಗಳೂರು :ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಎಫ್‌ಐಆರ್ ದಾಖಲಿಸಿದೆ.
ಒಂದೆಡೆ ಸಿಬಿಐ ತನಿಖೆಗೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೊರೆ ಹೋಗಿದ್ದಾರೆ. ದಸರಾ ರಜೆ ಬಳಿಕ ಈ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಗಳಿವೆ. ಮತ್ತೊಂದಡೆ ಇದೀಗ ಇಡಿ ಅಧಿಕಾರಿಗಳಿಗೂ ದೂರು ನೀಡಿದ್ದಾರೆ.
ಲೋಕಾಯುಕ್ತ ಬಳಿಕ ಈಗ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಎಫ್‌ಐಆರ್ ದಾಖಲಿಸಿದೆ. ಲೋಕಾಯುಕ್ತ ದಾಖಲಿಸಿರುವ ಎಫ್‌ಐಆರ್ ಅಧ್ಯಯನ ಮಾಡಿದ ಇ.ಡಿ ಬಳಿಕ ಪ್ರಕರಣ ದಾಖಲಿಸಿದ್ದು, ತನಿಖೆಗೆ ಮುಂದಾಗಿದೆ.