ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯ ಯುವ ಜನರಿಗಾಗಿ, ಯುವ ಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಠಿಯಿಂದ ಹೊಲಿಗೆ ತರಬೇತಿ ಮತ್ತು ವಿಡಿಯೋಗ್ರಾಫಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಸಂಬAಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಹೊಲಿಗೆ ತರಬೇತಿ ಶಿಬಿರ 2024ರ ನವೆಂಬರ್ 7 ರಿಂದ 26 ರವರೆಗೆ 20 ದಿನಗಳು ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರ 2024ರ ನವೆಂಬರ್ 15 ರಿಂದ 26ರ ವರೆಗೆ 12 ದಿನಗಳ ಕಾಲ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹೊಲಿಗೆ ತರಬೇತಿಗೆ ಎಸ್.ಎಸ್.ಎಲ್.ಸಿ ಪಾಸ್ ಅಥವಾ ಫೇಲ್ ಮತ್ತು ವಿಡಿಯೋಗ್ರಾಫಿ ತರಬೇತಿಗೆ ಪಿಯುಸಿ ಪಾಸ್ ಅಥವಾ ಫೇಲ್ ಆದ ಪರಿಶಿಷ್ಟ ಜಾತಿಯ 18-40 ವರ್ಷ ವಯೋಮಿತಿ ಹೊಂದಿರುವ ಯುವ ಜನರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಚಿತ್ರದುರ್ಗ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು ಈ ಕಚೇರಿಗೆ ಸಲ್ಲಿಸಲು ತಿಳಿಸಿದೆ.
ತರಬೇತಿ ಶಿಬಿರಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಈ ಶಿಬಿರದಲ್ಲಿ ಭಾಗವಹಿಸುವ ಯುವತಿಯರಿಗೆ ಸಾಮಾನ್ಯ ವಸತಿ ವ್ಯವಸ್ಥೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 155265, 9731251411 ಹಾಗೂ ಕಚೇರಿಯ ದೂರವಾಣಿ ಸಂಖ್ಯೆ 08194-235635ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಚೇತಾ ಎಂ ನೆಲವಗಿ ತಿಳಿಸಿದ್ದಾರೆ.