ಬೆಂಗಳೂರು : ಅಸ್ಸಾಂ ಎನ್‌ಐಎ ಅಧಿಕಾರಿಗಳಿಂದ ಬೆಂಗಳೂರು ಗ್ರಾಮಾಂತರದ ಜಿಗಣಿಯಲ್ಲಿ ಬಂಧಿತನಾಗಿದ್ದ ಉಲ್ಫಾ ಉಗ್ರ ಸ್ಫೋಟಕ ರಹಸ್ಯವೊಂದನ್ನು ತಿಳಿಸಿದ್ದಾನೆ. ಶಂಕಿತ ಉಗ್ರನ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿರುವ ಎನ್‌ಐಎ ಅಧಿಕಾರಿಗಳು ಮಂಗಳವಾರ ಅಸ್ಸಾಂನ ಉತ್ತರ ಲಖೀಂಪುರದಲ್ಲಿ ಜೀವಂತ ಐಇಡಿಗಳನ್ನ ವಶಕ್ಕೆ ತೆಗೆದುಕೊಂಡಿದ್ದಾರೆ.
ಎನ್‌ಐಎ ಅಧಿಕಾರಿಗಳ ವಿಚಾರಣೆ ವೇಳೆ ಶಂಕಿತ ಉಗ್ರ ಗಿರಿಸ್ ಬೋರಾ ಅಲಿಯಾಸ್ ಗೌತಮ್, ಅಸ್ಸಾಂನಲ್ಲಿ ಐಇಡಿ ಇಟ್ಟ ವಿಚಾರವನ್ನ ತಿಳಿಸಿದ್ದಾನೆ. ಅಲ್ಲದೇ ಉಲ್ಫಾ ಸಂಘಟನೆಯ ನಾಯಕರು ಹೇಳಿದಂತೆ ಐಇಡಿಗಳನ್ನ ಇಟ್ಟಿದ್ದೆ. ಆಗಸ್ಟ್ 15ರಂದು ಸ್ಫೋಟಿಸಲು ಸಂಚು ರೂಪಿಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ.
ಶಂಕಿತ ಉಗ್ರನ ಮಾಹಿತಿ ಮೇರೆಗೆ ತನಿಖೆ ನಡೆಸಿದ ಎನ್‌ಐಎ ಅಧಿಕಾರಿಗಳು ಲಖೀಂಪುರ ಜಿಲ್ಲೆಯಲ್ಲಿ ಇಟ್ಟಿದ್ದ ಕೆಲವು ಜೀವಂತ ಐಇಡಿಗಳನ್ನ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ.