ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ್ ಪಡೆಯಲಿ ತೆರಳುವ ಭಕ್ತರಿಗೆ ಕೇರಳ ಸರ್ಕಾರ ಮಹತ್ವದ ಸಂದೇಶದವೊಂದನ್ನು ಹೊರಡಿಸಿದೆ. ಶಬರಿಮಲೆ ಯಾತ್ರೆಗೆ ಇನ್ನು ಆನ್ಲೈಕ್ ಬುಕಿಂಗ್ ಕಡ್ಡಾಯ ಮಾಡಲಾಗಿದ್ದು, ಪ್ರತಿದಿನ 80,000 ಭಕ್ತರಿಗೆ ಅವಕಾಶ ಇರುತ್ತದೆ. ದಟ್ಟಣೆಯನ್ನು ನಿಯಂತ್ರಿಸಲು ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.
ಪ್ರಸಿದ್ಧ ಶಬರಿಮಲೆ ದೇವಾಲಯದ ವಾರ್ಷಿಕ ಮಂಡಲಂ ಮಕರವಿಳಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ವರ್ಷ ಆನ್ಲೈನ್ ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ಕೇರಳ ಸರ್ಕಾರ ನಿರ್ಧಾರ ಕೈಗೊಂಡಿದೆ.
ಕಳೆದ ವರ್ಷ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಆದ್ದರಿಂದ ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಭಾರಿ ಅವ್ಯವಸ್ಥೆ ಉಂಟಾಗಿತ್ತು. ಭಕ್ತರು ದಿನಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶಗಳು ಭುಗಿಲೆದ್ದಿದ್ದವು. ಈ ಹಿನ್ನೆಲೆ ಭಕ್ತರ ನಿರ್ವಹಣೆ ಸಮರ್ಪಕ ಆಗಿಸುವ ಹಿನ್ನೆಲೆ ಆನ್ಲೈನ್ನಲ್ಲಿ ಟಿಕೆಟ್ ಬುಕ್ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.