ಕಾರವಾರ : ಮುರುಡೇಶ್ವರ ಕಡಲ ತೀರದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಬೆನ್ನಲ್ಲೇ ಪ್ರವಾಸಿಗರಿಗೆ ಸಮುದ್ರಕ್ಕಿಳಿಯದಂತೆ ನಿರ್ಬಂಧ ವಿಧಿಸಲಾಗಿದೆ.
ಭಾನುವಾರ ಬೆಂಗಳೂರಿನ ಪಿ.ಯು ಕಾಲೇಜೊಂದರ ವಿದ್ಯಾರ್ಥಿ ಗೌತಮ್ (17) ಸಮುದ್ರದಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದನು. ಇನ್ನು ಈ ವೇಳೆ ಇನ್ನೋರ್ವ ಧನುಷ್ ಎಂಬಾತನನ್ನು ರಕ್ಷಿಸಲಾಗಿತ್ತು. ಈ ಅವಘಡದ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ನಿರ್ಬಂಧ ಹೇರಲು ಮುಂದಾಗಿದ್ದಾರೆ.
ವಾರಾತ್ಯವಾದ್ದರಿಂದ ಕಡಲ ತೀರಕ್ಕೆ ಹೆಚ್ಚು ಪ್ರವಾಸಿಗರು ಆಗಮಿಸಿದ್ದು, ಸಮುದ್ರಕ್ಕೆ ಇಳಿಯದಂತೆ ಮುರುಡೇಶ್ವರ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಇದರಿಂದಾಗಿ ಕಡಲ ತೀರ ಖಾಲಿ ಹೊಡೆಯುತ್ತಿದೆ.