ಚೆನ್ನೈ : ತಿರುಚ್ಚಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಶುಕ್ರವಾರ ಮಧ್ಯ ಆಗಸದಲ್ಲಿ ಹೈಡ್ರಾಲಿಕ್ ವೈಫಲ್ಯ ತಾಂತ್ರಿಕ ದೋಷವನ್ನು ಎದುರಿಸಿದೆ. ವಿಮಾನದಲ್ಲಿ 140 ಪ್ರಯಾಣಿಕರು ಇದ್ದಾರೆ ಎನ್ನಲಾಗಿದ್ದು, ವಿಮಾನವನ್ನು ಸುರಕ್ಷಿತವಾಗಿ ವಾಪಸ್ ತಿರುಚ್ಚಿಯಲ್ಲಿ ಇಳಿಸಲು ಪ್ರಯತ್ನಗಳು ನಡೆಯುತ್ತಿವೆ. ಪೈಲಟ್ ಈಗಾಗಲೇ ತುರ್ತು ಪರಿಸ್ಥಿತಿ ಘೋಷಿಸಿದ್ದು, ವಿಮಾನವನ್ನು ಸುರಕ್ಷಿತವಾಗಿ ಇಳಿಸಲು ಮುಂಜಾಗ್ರತಾ ಕ್ರಮವಾಗಿ ಇಂಧನವನ್ನು ಖಾಲಿ ಮಾಡಲು ಆಗಸದಲ್ಲಿ ಸುತ್ತು ಹೊಡೆಯಲಾಗುತ್ತಿದೆ.
ದೊಡ್ಡ ಮಟ್ಟದ ಅಪಘಾತ ಸಂಭವಿಸದಂತೆ ನೋಡಿಕೊಳ್ಳಲು 20 ಕ್ಕೂ ಹೆಚ್ಚು ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕಗಳನ್ನು ವಿಮಾನ ನಿಲ್ದಾಣದಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.