ತಮಿಳುನಾಡು: ಮೈಸೂರಿನಿಂದ ದರ್ಭಾಂಗಕ್ಕೆ ಹೋಗುತ್ತಿದ್ದ ಬಾಗ್ಮತಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಘಟನೆ ನಿನ್ನೆ (ಅ.11) ರಾತ್ರಿ 8.30 ರ ಸುಮಾರಿಗೆ ತಮಿಳುನಾಡಿನ ಕವರೈಪೆಟ್ಟೈ ಎಂಬಲ್ಲಿ ನಡೆದಿದೆ.ಕವರೈಪೆಟ್ಟೈ ನಿಲ್ಧಾಣಕ್ಕೆ ಎಕ್ಸ್ಪ್ರೆಸ್ ರೈಲು ಪ್ರವೇಶಿಸುವಾಗ ಹಳಿ ಬದಲಾವಣೆಯಾಗಿ ಲೂಪ್ ಲೈನನ್ಗೆ ಸ್ಥಳಾಂತರಗೊಂಡಿದ್ದ ಪರಿಣಾಮದಿಂದಾಗಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ರೈಲಿನ ಪಾರ್ಸೆಲ್ ವ್ಯಾನ್ಗೆ ಬೆಂಕಿ ಹೊತ್ತಿಕೊಂಡಿದ್ದು, 12-13 ಭೋಗಿಗಳು ಹಳಿತಪ್ಪಿದೆ. ಆ ಭಾಗದಲ್ಲಿ ರೈಲು ಸಂಚಾರ ಮುಚ್ಚಲಾಗಿದ್ದು , ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.
ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಮೇಲೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ನಿಗಾ ವಹಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಚೆನ್ನೈನ ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಚಿವ ಅವಧಿ ನೇಸರ್ ಹಾಗೂ ಉನ್ನತ ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್ಪ್ರೆಸ್ನಲ್ಲಿದ್ದ ಪ್ರಯಾಣಿಕರಿಗೆ ಪ್ರಯಾಣ ಮುಂದುವರೆಸಲು ಮತ್ತೊಂದು ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದ್ದು, ಇಂದು (ಅ.12) ಮುಂಜಾನೆ ಚೆನ್ನೈ ಸೆಂಟ್ರಲ್ ರೈಲು ನಿಲ್ಧಾಣದಿಂದ ಬೆಳಿಗ್ಗೆ 4.45 ರ ಸುಮಾರಿಗೆ ಹೊರಟಿತು. ಪ್ರಯಾಣಿಕರಿಗೆ ಅಹಾರ ಹಾಗೂ ನೀರಿನ್ನು ಒದಗಿಸಲಾಗಿತ್ತು.
ಎನ್ಡಿಆರ್ಎಫ್ ತಂಡ ಹಾಗೂ ಆಂಬ್ಯುಲೆನ್ಸ್ಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.