ರೇಣುಕಾಸ್ವಾಮಿ ಕೊಲೆ ಕೇಸು | ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ; ಅಭಿಮಾನಿಗಳಿಗೆ ಲಾಠಿ ರುಚಿ

WhatsApp
Telegram
Facebook
Twitter
LinkedIn

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ಗೆ ಜಾಮೀನು ನಿರಾಕರಿಸಲ್ಪಟ್ಟಿದೆ. ದರ್ಶನ್ ಬಂಧನಕ್ಕೊಳಗಾಗಿ ನಾಲ್ಕು ತಿಂಗಳು ಕಳೆದಿವೆ. ಚಾರ್ಜ್​ಶೀಟ್ ಸಲ್ಲಿಕೆ ಬಳಿಕ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಜಾಮೀನಿಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಲೇ ಬಂದಿದ್ದರು. ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್​ ಜಾಮೀನು ಕೊಡಲು ನಿರಾಕರಿಸಿದೆ. ಇದರಿಂದ ದರ್ಶನ್ ಜೈಲಿನಲ್ಲೇ ಮುಂದುವರಿಯುವುದು ಅನಿವಾರ್ಯ ಆಗಿದೆ. ಅವರು ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ.
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಅವರು ಜೂನ್ 11ರಂದು ಅರೆಸ್ಟ್ ಆದರು. ಆ ಬಳಿಕ ಅವರನ್ನು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿತ್ತು. ಆದರೆ, ಅಲ್ಲಿ ಅವರು ಐಷಾರಾಮಿ ವ್ಯವಸ್ಥೆ ಪಡೆದ ಕಾರಣಕ್ಕೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಈಗ ಈ ತೀರ್ಪಿನಿಂದ ಅವರು ಬಳ್ಳಾರಿ ಜೈಲಲ್ಲೇ ಇರಬೇಕಾಗಿದೆ. ಆದರೆ, ಅನಾರೋಗ್ಯದ ಕಾರಣ ನೀಡಿ ಬೆಂಗಳೂರು ಜೈಲಿಗೆ ಶಿಫ್ಟ್‌ ಆಗುತ್ತಾರಾ ಕಾದು ನೋಡಬೇಕಿದೆ.
ಪವಿತ್ರಾ ಗೌಡಗೂ ಜಾಮೀನು ಇಲ್ಲ: ಜಾಮೀನು ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದ ದರ್ಶನ್‌ ಆಪ್ತೆ ಪವಿತ್ರಾ ಗೌಡ ಅವರಿಗೂ ನಿರಾಸೆಯಾಗಿದೆ. ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದು, ದರ್ಶನ್​ ಎ2 ಆಗಿದ್ದಾರೆ. ಈ ಕೇಸ್​ನಲ್ಲಿ ಚಾರ್ಜ್​ಶೀಟ್​ ಸಲ್ಲಿಕೆ ಆದ ಬಳಿಕ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅವರ ವಿಚಾರಣೆ ನಡೆದಿದ್ದು, ಇಂದು (ಅ.14) ಬೆಂಗಳೂರಿನ 57ನೇ ಸಿಸಿಹೆಚ್​ ಕೋರ್ಟ್​ ಆದೇಶ ನೀಡಿದೆ. ಪವಿತ್ರಾ ಗೌಡ ಅವರಿಗೆ ಜಾಮೀನು ಸಿಕ್ಕಿಲ್ಲ. ಹಾಗಾಗಿ ಅವರು ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸುವುದು ಅನಿವಾರ್ಯ ಆಗಿದೆ.
ಬಳ್ಳಾರಿ ಜೈಲು ಬಳಿ ಅಭಿಮಾನಿಗಳಿಗೆ ಲಾಠಿ ಬೀಸಿದ ಪೊಲೀಸರು: ನಟ ದರ್ಶನ್‌ಗೆ ಇಂದು ಜಾಮೀನು ಸಿಕ್ಕಿದರೆ ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ನಿರೀಕ್ಷೆಯಲ್ಲಿ ಬಳ್ಳಾರಿ ಜೈಲಿನ ಬಳಿ ದೊಡ್ಡ ಸಂಖ್ಯೆಯಲ್ಲಿ ದರ್ಶನ್‌ ಅಭಿಮಾನಿಗಳು ನೆರೆದಿದ್ದರು. ಈ ವೇಳೆ ಅಭಿಮಾನಿಗಳಿಗೆ ಲಾಠಿ ಬೀಸಿ ಚದುರಿಸಲಾಗಿದೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon