ಲಿಖಿತ ಪರೀಕ್ಷೆಯಿಲ್ಲದೇ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗವಕಾಶ- 2 ಲಕ್ಷದವರೆಗೆ ಸಂಬಳ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ಕೆಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. IRCTC ಹೊರಡಿಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಅರ್ಹತೆ, ವಯಸ್ಸಿನ ಮಿತಿ, ವೇತನ ಸೇರಿದಂತೆ ಎಲ್ಲಾ ಮಾಹಿತಿ ಲಭ್ಯವಿದೆ. ಸದ್ಯ ನೇಮಕಾತಿ ವಯಸ್ಸಿನ ಮಿತಿ ಗರಿಷ್ಠ 55 ವರ್ಷ. ನವೆಂಬರ್ 6, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಲಿಖಿತ ಪರೀಕ್ಷೆ ಇಲ್ಲದಿರುವ ಕಾರಣ ಸಂದರ್ಶನದ ಮೂಲಕ ಸೂಕ್ತರನ್ನು ಇಲಾಖೆ ಆಯ್ಕೆ ಮಾಡಲಿದೆ. IRCTC ಅಧಿಕೃತ ವೆಬ್‌ಸೈಟ್‌ನಲ್ಲಿ ಉದ್ಯೋಗ ನೇಮಕಾತಿ ಮಾಹಿತಿ ನೀಡಲಾಗಿದೆ. ಇಷ್ಟೇ ಅಲ್ಲ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿನಂತಿಸಲಾಗಿದೆ.

ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ತಿಂಗಳಿಗ 15,600 ರೂಪಾಯಿಂದ ಗರಿಷ್ಠ 39,100 ರೂಪಾಯಿವರೆಗೆ ನಿಗದಿಪಡಿಸಲಾಗಿದೆ. ಇನ್ನು ಡೆಪ್ಯೂಟಿ ಜನರಲ್ ಮ್ಯಾನೇಜರ್ (ಫೈನಾನ್ಸ್) ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 70,000 ರೂಪಾಯಿಂದ 2 ಲಕ್ಷ ರೂಪಾಯಿವರೆಗೆ ಸಂಬಳ ನಿಗದಿಪಡಿಸಲಾಗಿದೆ. ಅರ್ಹ ಹಾಗೂ ಸೂಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ, ವಿದ್ಯಾರ್ಹತೆ ದಾಖಲೆ ಸೇರಿಂತೆ ಇತರ ದಾಖಲೆಗಳ ಪತ್ರಗಳನ್ನು ಲಗತ್ತಿಸಿ ಆನ್‌ಲೈನ್ ಮೂಲಕ ಅಥವಾ IRCTC ಇಮೇಲ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ದಾಖಲೆ, ವಿವರ, ಪ್ರಮಾಣಪತ್ರಗಳ ಪರಿಶೀಲಿಸಿದ ಬಳಿಕ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಇಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ. ಸಂದರ್ಶನದ ಮೂಲಕ ಸೂಕ್ತ ಹಾಗೂ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರಿ ಸಂಸ್ಥೆಯ ಹುದ್ದೆಗೆ ಭಾರಿ ಬೇಡಿಕೆ ಇದೆ. ಈಗಾಗಲೇ IRCTC ಉದ್ಯೋಗಕ್ಕೆ ಹಲವರು ಅರ್ಜಿ ಸಲ್ಲಿಸಿದ್ದಾರೆ. ವೇತನ ಜೊತೆಗೆ ಇತರ ಕೇಂದ್ರ ಸರ್ಕಾರಿ ನೌಕರರಿಗೆ ಇರುವ ಸೌಲಭ್ಯಗಳು ಸಿಗಲಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement